ನಾಗ್ಪುರ ಹಿಂಸಾಚಾರ: ಕರ್ಫ್ಯೂ ಜಾರಿ; 50ಕ್ಕೂ ಹೆಚ್ಚು ಜನರ ಬಂಧನ

ಧಾರ್ಮಿಕ ಪುಸ್ತಕವನ್ನು ಸುಟ್ಟುಹಾಕಲಾಗಿದೆ ಎಂಬ ವದಂತಿಗಳ ನಂತರ ಸೋಮವಾರ ಸಂಜೆ ಕೇಂದ್ರ ನಾಗ್ಪುರದಲ್ಲಿ ಹಿಂಸಾಚಾರ ನಡೆದಿದೆ. ಪ್ರತಿಭಟನಾಕಾರರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ರು. ಇದರ ಪರಿಣಾಮವಾಗಿ ಕಲ್ಲು ತೂರಾಟ ಮತ್ತು ಬೆಂಕಿ ಹಚ್ಚಲಾಯಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ಭದ್ರತಾ ಪಡೆಗಳು ಅಶ್ರುವಾಯು ಪ್ರಯೋಗಿಸಿದೆ. ಮತ್ತು ಜನಸಮೂಹವನ್ನು ಚದುರಿಸಲು ಲಾಠಿ ಪ್ರಹಾರ ನಡೆಸಿದವು. ಬಲಪಂಥೀಯ ಗುಂಪು ಔರಂಗಜೇಬ್ ಸಮಾಧಿಯನ್ನು ತೆಗೆದುಹಾಕುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ನಂತರ ಅಶಾಂತಿ ಪ್ರಾರಂಭವಾಯಿತು. ಉದ್ವಿಗ್ನತೆ ಶೀಘ್ರವಾಗಿ ಉಲ್ಬಣಗೊಂಡಿತು, ದುಷ್ಕರ್ಮಿಗಳು ಆಸ್ತಿಪಾಸ್ತಿಗೆ ಹಾನಿ ಮಾಡಿದ್ದಾರೆ ಮತ್ತು ವಾಹನಗಳಿಗೆ ಬೆಂಕಿ ಹಚ್ಚಿದರ ಪರಿಣಾಮವಾಗಿ ಪರಿಸ್ಥಿತಿ ನಿಯಂತ್ರಣ ಮೀರಿದೆ.
ಔರಂಗಜೇಬ್ ಸಮಾಧಿಯನ್ನು ತೆಗೆದುಹಾಕುವ ಬೇಡಿಕೆಯ ಬಗ್ಗೆ ಉದ್ವಿಗ್ನತೆ ಹೆಚ್ಚಾದ ಕಾರಣ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿಎನ್ಎಸ್ಎಸ್) ಸೆಕ್ಷನ್ 163 ರ ಅಡಿಯಲ್ಲಿ ನಾಗ್ಪುರ ನಗರದ ಹಲವಾರು ಪ್ರದೇಶಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ ಎಂದು ಮಹಾರಾಷ್ಟ್ರ ಪೊಲೀಸ್ ಅಧಿಕೃತ ಅಧಿಸೂಚನೆ ತಿಳಿಸಿದೆ.
ಕೊಟ್ವಾಲಿ, ಗಣೇಶಪೇತ್, ತಹಸಿಲ್, ಲಕಾಡ್ಗಂಜ್, ಪಚ್ಪೌಲಿ, ಶಾಂತಿನಗರ, ಸಕ್ಕರ್ದಾರಾ, ನಂದನವನ್, ಇಮಾಮ್ವಾಡಾ, ಯಶೋಧರನಗರ ಮತ್ತು ಕಪಿಲ್‌ನಗರ ಸೇರಿದಂತೆ ಹಲವಾರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕರ್ಫ್ಯೂ ವಿಧಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj