ಅಂಗಡಿ ಬಂದ್ ಮಾಡಿಸಲು ಯತ್ನ: ಪೊಲೀಸರು ಕನ್ನಡ ಪರ ಸಂಘಟನೆಗಳ ನಡುವೆ ಮಾತಿನ ಚಕಮಕಿ

22/03/2025
ಚಿಕ್ಕಮಗಳೂರು: ಕರ್ನಾಟಕ ಬಂದ್ ಗೆ ಕರೆ ಹಿನ್ನೆಲೆ ಕನ್ನಡ ಪರ ಸಂಘಟನೆಗಳಿಂದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಯಿತು.
ಇದೇ ವೇಳೆ ಅಂಗಡಿಗಳನ್ನ ಬಂದ್ ಮಾಡುವಂತೆ ಕನ್ನಡ ಪರ ಸಂಘಟನೆಗಳು ಮನವಿ ಮಾಡಿದರು. ಈ ವೇಳೆ ಪೊಲೀಸರು ಹಾಗೂ ಸಂಘಟನೆ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.
ಯಾವುದೇ ಅಂಗಡಿಗಳನ್ನ ಬಲವಂತವಾಗಿ ಬಂದ್ ಮಾಡಿಸದಂತೆ ಪೊಲೀಸರು ಸೂಚನೆ ನೀಡಿದ ಘಟನೆ ಚಿಕ್ಕಮಗಳೂರು ನಗರದ ಸರ್ಕಾರಿ ಬಸ್ ನಿಲ್ದಾಣದಲ್ಲಿ ನಡೆಯಿತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: