ಯತ್ನಾಳ್ ಹೋರಾಟಕ್ಕೆ ಬಿಜೆಪಿ ಹೈಕಮಾಂಡ್ ಜಟ್ಕಾ ಕಟ್ ಮಾಡಿದೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಬಿಜೆಪಿ ಶುದ್ಧೀಕರಣ ಮಾಡುವ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೋರಾಟಕ್ಕೆ ಬಿಜೆಪಿ ಹೈಕಮಾಂಡ್ ಜಟ್ಕಾ ಕಟ್ ಆಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಲೇವಡಿ ಮಾಡಿದ್ದಾರೆ.
ಯತ್ನಾಳ್ ಉಚ್ಛಾಟನೆಗೆ ಪ್ರತಿಕ್ರಿಯೆ ನೀಡಿದ ಅವರು, ಯತ್ನಾಳ್ ಹೋರಾಟ ಕುಟುಂಬ ರಾಜಕೀಯ, ಭ್ರಷ್ಟಾಚಾರ ವಿರುದ್ಧ ಇತ್ತು, ಬಿಜೆಪಿಯಲ್ಲಿನ ಕಲುಶಿತ ವಾತಾವರಣವನ್ನು ಮುಕ್ತಗೊಳಿಸಬೇಕು ಎಂದು ಯತ್ನಾಳ್, ಕೆ.ಎಸ್.ಈಶ್ವರಪ್ಪ ಹೋರಾಟ ಮಾಡುತ್ತಿದ್ದರು. ಆದ್ರೆ ಯತ್ನಾಳ್ ನ್ನು ಉಚ್ಛಾಟನೆ ಮಾಡುವ ಮೂಲಕ ಬಿಜೆಪಿ ಹೈಕಮಾಂಡ್ ಜಟ್ಕಾ ಕಟ್ ಮಾಡಿದೆ ಎಂದರು.
ಕೇಂದ್ರದ ಬಿಜೆಪಿ ನಾಯಕರು ಯತ್ನಾಳ್ ಮತ್ತು ಇತರ ಹಿಂದೂ ಹುಲಿಗಳಿಗೆ ಸ್ಪಷ್ಟ ಸಂದೇಶ ನೀಡಿದೆ. ನಮಗೆ ಭ್ರಷ್ಟಾಚಾರ ಇಷ್ಟ, ಕುಟುಂಬ ರಾಜಕಾರಣ ಇಷ್ಟ. ನೀವು ಎಷ್ಟೇ ತಿಪ್ಪರಲಾಗ ಹಾಕಿದ್ರೂ, ಇಬ್ಬರನ್ನು ಬಿಟ್ಟುಕೊಡುವುದಿಲ್ಲ ಎಂಬ ಸಂದೇಶ ನೀಡಿದೆ ಎಂದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: