ಇಂದಿನಿಂದ ಟ್ಯಾಕ್ಸಿ, ಕ್ಯಾಬ್ ದರ ಹೆಚ್ಚಳ: ಕಾರಣ ಏನು?

ಬೆಂಗಳೂರು: ಇಂದಿನಿಂದಲೇ ಟ್ಯಾಕ್ಸಿ ಕ್ಯಾಬ್ ದರ ಏರಿಕೆಯಾಗಲಿದ್ದು, ಪ್ರತಿ ಕಿ.ಮೀ. ಮೇಲೆ 2 ರಿಂದ 5 ರೂ. ವರೆಗೆ ಹೆಚ್ಚಳ ಮಾಡಲಾಗುತ್ತಿದೆ.
ಉಕ್ಕು ಮತ್ತು ಆಟೋ ಮೊಬೈಲ್ ದರ ಹೆಚ್ಚಳದ ಹಿನ್ನೆಲೆ ಕಾರು ತಯಾರಿಕಾ ಕಂಪನಿಗಳ ದರ ಹೆಚ್ಚಳ ಮಾಡಿದೆ, ಕೇಂದ್ರ ಸರ್ಕಾರ ಟೋಲ್ ದರ ಹೆಚ್ಚಳ ಮಾಡಿದೆ. ರಾಜ್ಯ ಸರ್ಕಾರ ಡಿಸೇಲ್ ಮೇಲಿನ ಮಾರಾಟ ತೆರಿಗೆ ಹೆಚ್ಚಳ ಮಾಡಿದೆ. ಹೀಗಾಗಿ ಟೂರ್ಸ್ ಆ್ಯಂಡ್ ಟ್ರಾವೆಲ್ಸ್, ಕ್ಯಾಬ್ ಗಳ ಬೆಲೆ ಏರಿಕೆಯಾಗಿದೆ.
ಟೋಲ್, ಕಾರು ಕಂಪನಿಗಳ ದರ ಏರಿಕೆ, ರಾಜ್ಯ ಸಾರಿಗೆ ಇಲಾಖೆಯ ಕಾರಿನ ಮೇಲೆ ಟ್ಯಾಕ್ಸ್ ಹೆಚ್ಚಳ ಪ್ರಮುಖವಾಗಿ ಡಿಸೇಲ್ ಮೇಲೆ ಮಾರಾಟ ತೆರಿಗೆ ಹೆಚ್ವಳ ಹೀಗೆ ಸಾಲು ಸಾಲು ಬೆಲೆ ಏರಿಕೆಯಿಂದ ಕಂಗಾಲಾಗಿರುವ ಟೂರ್ಸ್ ಆ್ಯಂಡ್ ಟ್ರಾವೆಲ್ಸ್ ಅಸೋಸಿಯೇಷನ್, ಕ್ಯಾಬ್ ಮಾಲೀಕರು ಮತ್ತು ಚಾಲಕರ ಅಸೋಸಿಯೇಷನ್ಗಳು ಪ್ರತಿ ಕಿಮೀಗೆ 2 ರಿಂದ 5 ರೂ. ವರೆಗೆ ಹೆಚ್ಚಳ ಮಾಡಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/HEkqDgrW2BlJLad5kZ1DX7