ಅಪ್ರಾಪ್ತ ಬಾಲಕಿಯ ಮೇಲೆ ತಂದೆಯಿಂದ ಲೈಂಗಿಕ ದೌರ್ಜನ್ಯ: ಆರೋಪಿಯ ಬಂಧನ

ಗದಗ: ಅಪ್ರಾಪ್ತ ಮಗಳ ಮೇಲೆ ತಂದೆಯೇ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.
16 ವರ್ಷದ ಅಪ್ರಾಪ್ತ ಬಾಲಕಿ ಮೇಲೆ 55 ವರ್ಷದ ತಂದೆ ಕಳೆದ ಒಂದು ವರ್ಷದಿಂದ ನಿರಂತರವಾಗಿ ಅತ್ಯಾಚಾರ ನಡೆಸಿರುವ ಆರೋಪ ಕೇಳಿ ಬಂದಿದೆ.
ಗದಗ ಜಿಲ್ಲೆಯ ಮುಳಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿ ತಂದೆ ರಮೇಶ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ನೊಂದ ಬಾಲಕಿ ಗರ್ಭಿಣಿಯಾಗಿದ್ದು, ಆಕೆಯನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ತಂದೆ ಅತ್ಯಾಚಾರ ನಡೆಸುತ್ತಿದ್ದ. ಇದನ್ನು ಯಾರಿಗಾದರೂ ತಿಳಿಸಿದರೆ, ಕೊಲೆ ಮಾಡುವುದಾಗಿ ಬೆದರಿಸಿದ್ದ ಎಂದು ನೊಂದ ಬಾಲಕಿ ಆರೋಪಿಸಿದ್ದಾಳೆ.
ಸದ್ಯ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಡಿಎನ್ ಎ ಪರೀಕ್ಷೆಯ ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುತ್ತದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: