ಗುಡುಗು ಮಳೆ: ರಾಜ್ಯದಲ್ಲಿ ಸಿಡಿಲು ಬಡಿದು ಮೂವರು ಸಾವು - Mahanayaka

ಗುಡುಗು ಮಳೆ: ರಾಜ್ಯದಲ್ಲಿ ಸಿಡಿಲು ಬಡಿದು ಮೂವರು ಸಾವು

lighting death
11/04/2025

ಬೆಂಗಳೂರು: ರಾಜ್ಯದ ವಿವಿಧೆಡೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗಿದ್ದು, ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಒಟ್ಟು ಮೂವರು ಸಿಡಿಲು ಬಡಿದು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.


Provided by

ಕೊಪ್ಪಳದ ಸಿಂದೋಗಿಯಲ್ಲಿ ಕೆಲಸ ಮಾಡಲು ಹೊಲಕ್ಕೆ ಹೋಗಿದ್ದ ಇಬ್ಬರು ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ಗುರುವಾಡ ನಡೆದಿದೆ.  ಕೊಪ್ಪಳದ ಗೌರಿ ಅಂಗಳದ ನಿವಾಸಿಗಳಾದ ಮಂಜುನಾಥ್ ರಾಮಲಿಂಗಪ್ಪ ಗಾಳಿ(48) ಹಾಗೂ ಗೋವಿಂದಪ್ಪ ಮ್ಯಾಗಲಮನಿ(62) ಮೃತಪಟ್ಟವರಾಗಿದ್ದಾರೆ.

ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮಳೆ ಬಂದಿದ್ದು,  ಮಳೆಯಿಂದ ರಕ್ಷಣೆ ಪಡೆಯಲು ಹೊಲದಲ್ಲಿರುವ ಮನೆಯೊಳಗೆ ಹೋಗಿ ಕಿಟಕಿ ಬಳಿ ನಿಂತು ಮಳೆ ನೋಡುತ್ತಿದ್ದ ವೇಳೆ ಏಕಾಏಕಿ ಸಿಡಿಲು ಬಡಿದಿದ್ದು, ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.


Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by
Provided by <
Provided by
Provided by
Provided by
Provided by

ಸಿಡಿಲು ಬಡಿದು ಯುವಕ ಸಾವು:

ಇನ್ನೂ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಂಡೆಬಸಾಪುರ ತಾಂಡದಲ್ಲಿ ಯುವನೊಬ್ಬ ಸಿಡಿಲು ಬಡಿದು ಸಾವನ್ನಪ್ಪಿದ್ದಾನೆ.  ಬಂಡೆಬಸಾಪುರ ಗ್ರಾಮದ ಪಾಂಡುನಾಯ್ಕ್(18) ಮೃತಪಟ್ಟ ಯುವಕನಾಗಿದ್ದಾನೆ.

ಮಳೆ ಬರುತ್ತಿದ್ದ ವೇಳೆ ಮನೆಯ ಬಳಿ ಯುವಕ ನಿಂತಿದ್ದ, ಈ ವೇಳೆ ಏಕಾಏಕಿ ಸಿಡಿಲು ಬಡಿದ ಪರಿಣಾಮ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸಿಡಿಲಿನ ತೀವ್ರತೆಗೆ ಮನೆಯ ಗೋಡೆಗಳಿಗೂ ಹಾನಿಯಾಗಿವೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ