ಕಾಂಗ್ರೆಸ್ ಪಕ್ಷದಿಂದ ಮಾತ್ರ ದೇಶದ ಸಮಗ್ರ ಪ್ರಗತಿ ಸಾಧ್ಯ: ಬೆಳ್ತಂಗಡಿಯಲ್ಲಿ ಡಿ.ಕೆ.ಶಿವಕುಮಾರ್ ಹೇಳಿಕೆ

ಬೆಳ್ತಂಗಡಿ: ಕಾರ್ಯಕರ್ತರೇ ಕಾಂಗ್ರೆಸ್ ಪಕ್ಷದ ಶಕ್ತಿ, ಕಾಂಗ್ರೆಸ್ ಪಕ್ಷದಿಂದ ಮಾತ್ರ ದೇಶದ ಸಮಗ್ರ ಪ್ರಗತಿ ಸಾಧ್ಯ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವಿವಾರ ಹೇಳಿದರು.
ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವಾಪ್ತಿಯ ಗುರುವಾಯನಕೆರೆ ಶಕ್ತಿನಗರ ಮೈದಾನದಲ್ಲಿ ರವಿವಾರ ಹಮ್ಮಿಕೊಳ್ಳಲಾದ ‘ಸರಕಾರದನಡೆ ಕಾರ್ಯಕರ್ತರ ಕಡೆ’ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಕಾರ್ಯಕರ್ತರೇ ಕಾಂಗ್ರೆಸ್ ಪಕ್ಷದ ಶಕ್ತಿ, ರಾಜ್ಯ ಸರಕಾರದ ಪಂಚ ಗ್ಯಾರಂಟಿಗಳನ್ನು ಇನ್ನಷ್ಟು ಹೆಚ್ಚಿನ ರೀತಿಯಲ್ಲಿ ಜನರಿಗೆ ತಲುಪಿಸಲು ಪ್ರಯತ್ನ ಮಾಡಬೇಕು ಎಂದರು.
ಕಾಂಗ್ರೆಸ್ ಪಕ್ಷದಿಂದ ಮಾತ್ರ ದೇಶದ ಸಮಗ್ರ ಪ್ರಗತಿ ಸಾಧ್ಯ. ಮುಂದಿನ ಚುನಾವಣೆಯಲ್ಲಿ ಕರಾವಳಿಯಿಂದ ಕನಿಷ್ಠ 10 ಮಂದಿ ಆಯ್ಕೆಯಾಗಿ ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದರು.
ಕರಾವಳಿಯಲ್ಲಿ ಉದ್ಯೋಗ ಸೃಷ್ಟಿ ಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲೆಗೆ ಭೇಟಿ ನೀಡಿ ಸಭೆ ನಡೆಸಲಾಗುವುದು ಎಂದು ಇದೇ ವೇಳೆ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಶಾಸಕ ಅಶೋಕ್ ಕುಮಾರ್ ರೈ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ವಕ್ತಾರರಾದ ನಿಕೇತ್ ರಾಜ್ ಮೌರ್ಯ, ಸುಧೀರ್ ಕುಮಾರ್ ಮುರೊಳ್ಳಿ, ಮಾಜಿ ಸಚಿವರಾದ ರಮಾನಾಥ ರೈ, ವಿನಯ್ ಕುಮಾರ್ ಸೊರಕೆ, ಅಭಯಚಂದ್ರ ಜೈನ್ ಮತ್ತಿತರರಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: