ಮಾಜಿ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಪತ್ನಿಯಿಂದಲೇ ಬರ್ಬರ ಹತ್ಯೆ!: ಹತ್ಯೆಗೆ ಕಾರಣ ಏನು?

ಬೆಂಗಳೂರು: ಕರ್ನಾಟಕ ಮಾಜಿ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರು ಬರ್ಬರವಾಗಿ ಹತ್ಯೆಯಾಗಿದ್ದು, ಅವರ ಧರ್ಮಪತ್ನಿ ಪಲ್ಲವಿ ಅವರೇ ಹತ್ಯೆ ಮಾಡಿದ್ದಾರೆ ಎಂಬ ವಿಚಾರ ಬಯಲಾಗಿದೆ.
68 ವರ್ಷದ ಓಂ ಪ್ರಕಾಶ್ ಅವರು ನಿವೃತ್ತಿಯ ಬಳಿಕ ಬೆಂಗಳೂರಿನ ಎಚ್ ಎಸ್ ಆರ್ ಲೇಔಟ್ ಮನೆಯಲ್ಲಿ ವಾಸವಾಗಿದ್ದರು. ಪತ್ನಿಯ ಜತೆ ನೆಲೆಸಿದ್ದರು. ಮಾನಸಿಕ ಸ್ಥಿಮಿತತೆ ಕಳೆದುಕೊಂಡ ಪತ್ನಿ ಭಾನುವಾರ ಸಂಜೆ ಓಂ ಪ್ರಕಾಶ್ ಅವರನ್ನು ಕೊಲೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ಘಟನೆಯ ಕುರಿತು ಎಚ್ ಎ ಸ್ಆರ್ ಲೇಔಟ್ ನಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್ ಜಾನ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ. ಕೊಲೆ ವಿಚಾರ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ರಕ್ತದ ಮಡುವಿನಲ್ಲಿ ಬಿದ್ದಿದ್ದ ನಿವೃತ್ತ ಅಧಿಕಾರಿಯನ್ನು ಕಂಡು ಶಾಕ್ ಆಗಿದ್ದಾರೆ. ಇನ್ನು ಮನೆಯಲ್ಲೇ ಇದ್ದ ಅವರ ಪತ್ನಿ ಹಾಗೂ ಮಗಳನ್ನು ವಿಚಾರಣೆಗೆ ಕರೆದೊಯ್ಯಿದಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಕೊಲೆಗೆ ಕೌಟುಂಬಿಕ ಕಲಹವೇ ಕಾರಣವಿರಬಹುದು ಎಂದು ತಿಳಿದುಬಂದಿದೆ. ಓಂ ಪ್ರಕಾಶ್ ಹಾಗೂ ಅವರ ಪತ್ನಿ ಜಗಳ ನೆರೆ ಹೊರೆ, ಸಂಬಂಧಿಕರು ಹಾಗೂ ಹಲವು ನಿವೃತ್ತ ಪೊಲೀಸ್ ಅಧಿಕಾರಿಗಳಿಗೆ ತಿಳಿದಿತ್ತು. ಕೆಲ ದಿನಗಳಿಂದ ಜಗಳ ತಾರಕಕ್ಕೇರಿ ಪತ್ನಿ ಮನೆಯಲ್ಲಿ ದೊಡ್ಡ ರಾದ್ಧಾಂತವನ್ನೇ ಮಾಡಿದ್ದರು ಎನ್ನಲಾಗಿದೆ. ಇನ್ನು ಓಂ ಪ್ರಕಾಶ್ ಅವರು ತಮ್ಮ ಸಹೋದರಿ ಹೆಸರಲ್ಲಿ ಜಮೀನು ಮಾಡಿದ್ದು ಅದನ್ನು ಹಿಂಪಡೆಯುವಂತೆ ಗಂಡನ ಮೇಲೆ ಜಗಳ ಮಾಡುತ್ತಿದ್ದರು ಎನ್ನಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD