ಪಾಕಿಸ್ತಾನಿ ಪ್ರಜೆಗಳು ಭಾರತ ತೊರೆಯುವಂತೆ ಕೇಂದ್ರ ಸರ್ಕಾರ ಆದೇಶ: ವೀಸಾ ಸೇವೆ ಸ್ಥಗಿತ

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದ ವಿರುದ್ಧ ಭಾರತ ಕಠಿಣ ನಿರ್ಧಾರ ಕೈಗೆತ್ತಿಕೊಂಡಿದೆ. ಗುರುವಾರ ಪಾಕಿಸ್ತಾನಿ ಪ್ರಜೆಗಳ ವೀಸಾ ಸೇವೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲಾಗಿದೆ.
ಏಪ್ರಿಲ್ 27ರಿಂದ ಜಾರಿಗೆ ಬರುವಂತೆ ಎಲ್ಲಾ ಪಾಕಿಸ್ತಾನಿ ಪ್ರಜೆಗಳ ವೀಸಾ ರದ್ದುಗೊಂಡಿರುವುದರಿಂದ ಅವರು ಭಾರತ ತೊರೆಯುವಂತೆ ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಇನ್ನೂ ಭಾರತೀಯ ಪ್ರಜೆಗಳು ಪಾಕಿಸ್ತಾನಕ್ಕೆ ಪ್ರಯಾಣಿಸದಂತೆ ವಿದೇಶಾಂಗ ಸಚಿವಾಲಯ ಸೂಚನೆ ನೀಡಿದೆ.
ಪಹಲ್ಗಾಮ್ ನಲ್ಲಿ ಭಾರತೀಯ ಪ್ರವಾಸಿಗರನ್ನು ಉಗ್ರರು ಬಲಿ ಪಡೆದ ನಂತರ ಭದ್ರತೆ ಕುರಿತಂತೆ ಭಾರತ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ. ಪಾಕಿಸ್ತಾನಿ ಪ್ರಜೆಗಳಿಗೆ ನೀಡಿರುವ ಎಲ್ಲಾ ಅಸ್ತಿತ್ವದಲ್ಲಿರುವ ವೀಸಾಗಳನ್ನು ಏಪ್ರಿಲ್ 27, 2025ರಿಂದ ಜಾರಿಗೆ ಬರುವಂತೆ ರದ್ದುಗೊಳಿಸಲಾಗಿದೆ.
ಇನ್ನೂ ಪಾಕಿಸ್ತಾನಿ ಪ್ರಜೆಗಳಿಗೆ ನೀಡಲಾಗುವ ವೈದ್ಯಕೀಯ ವೀಸಾಗಳು ಏಪ್ರಿಲ್ 29, 2025ರವರೆಗೆ ಮಾತ್ರವೇ ಮಾನ್ಯತೆ ಪಡೆದಿದೆ ಎಂದು ವಿದೇಶಾಂಗ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: