ಕೊವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ನಾಲ್ವರು ಮೃತ್ಯು  | ಇಬ್ಬರ ಸ್ಥಿತಿ ಗಂಭೀರ - Mahanayaka
9:13 PM Thursday 12 - December 2024

ಕೊವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ನಾಲ್ವರು ಮೃತ್ಯು  | ಇಬ್ಬರ ಸ್ಥಿತಿ ಗಂಭೀರ

covid
10/04/2021

ನಾಗ್ಪುರ: ಕೊವಿಡ್ ಆಸ್ಪತ್ರೆಯಲ್ಲಿನ ತೀವ್ರ ಘಟಕದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ನಾಲ್ವರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ನಾಗಪುರದಲ್ಲಿ ನಡೆದಿದೆ.

ಘಟನೆಯಲ್ಲಿ ಮೂವರು ಪುರುಷರು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಈ ಘಟಕದಲ್ಲಿದ್ದ 27 ರೋಗಿಗಳನ್ನು ಬೇರೆ ಆಸ್ಪತ್ರೆಗೆ ರವಾನಿಸಲಾಗಿದೆ. ಅವರ ಆರೋಗ್ಯದ ಬಗ್ಗೆ ಈಗ ಏನೂ ಹೇಳಲು ಸಾಧ್ಯವಿಲ್ಲ ಎಂದು ಹೇಳಲಾಗಿದೆ.

ಘಟನೆಯಲ್ಲಿ ಮೃತಪಟ್ಟಿರುವ ನಾಲ್ವರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಗಾಯಗೊಂಡವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯ 2ನೇ ಹಂತಸ್ತಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ 10 ರೋಗಿಗಳ ಪೈಕಿ ಆರು ಮಂದಿ ಹೊರಗೆ ಓಡಿಬಂದಿದ್ದಾರೆ. ಉಳಿದ ನಾಲ್ವರನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದ್ದಾರೆ.

ಇತ್ತೀಚಿನ ಸುದ್ದಿ