ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್ | ಬಸ್ ನಲ್ಲಿದ್ದವರ ಸ್ಥಿತಿ ಏನು ಗೊತ್ತಾ? - Mahanayaka
10:10 AM Saturday 21 - September 2024

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್ | ಬಸ್ ನಲ್ಲಿದ್ದವರ ಸ್ಥಿತಿ ಏನು ಗೊತ್ತಾ?

bus
12/04/2021

ಜಮ್ಮು-ಕಾಶ್ಮೀರ: ಚಾಲಕನ ನಿಯಂತ್ರಣ ಕಳೆದುಕೊಂಡ ಮಿನಿ ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದ ಘಟನೆ ಜಮ್ಮು-ಕಾಶ್ಮೀರದ ದೋಡಾದಲ್ಲಿ ನಡೆದಿದ್ದು, ಘಟನೆಯಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ.

ಪ್ರಯಾಣಿಕರ ಹೊತ್ತೊಯ್ಯುತ್ತಿದ್ದ ಮಿಸ್​ ಬಸ್  ಜಮ್ಮು-ಕಾಶ್ಮೀರದ ದೋಡಾದಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಆಳವಾಗಿದ್ದ ಕಂದಕಕ್ಕೆ ಉರುಳಿದ್ದು, ಪರಿಣಾಮವಾಗಿ 6 ಮಂದಿ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆ ನಡೆದ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ತನಿಖೆ ನಡೆಸಲಾಗುವುದು ಎಂದು ಘಟನೆಗೆ ಸಂಬಂಧಿಸಿದಂತೆ ದೋಡಾ ಡೆಪ್ಯುಟಿ ಪೊಲೀಸ್ ಕಮಿಷನರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.


Provided by

ಇತ್ತೀಚಿನ ಸುದ್ದಿ