ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಅಂತ್ಯ: ಕೋಡಿಹಳ್ಳಿ ಚಂದ್ರಶೇಖರ್ - Mahanayaka

ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಅಂತ್ಯ: ಕೋಡಿಹಳ್ಳಿ ಚಂದ್ರಶೇಖರ್

kodihalli chandrashekhar
22/04/2021

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿದ್ದ ಸಾರಿಗೆ ನೌಕರರ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆದುಕೊಳ್ಳಲಾಗಿದೆ ಎಂದು ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

ಕಳೆದ 15ದಿನಗಳಿಂದ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮುಷ್ಕರ ನಡೆಸಿದ್ದ ನೌಕರರು, ಹೈಕೋರ್ಟ್ ಆದೇಶದಂತೆ ಮುಷ್ಕರ ಅಂತ್ಯಗೊಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ,  ಕೊರೊನಾ ಮಿತಿಮೀರಿ ಹೋಗುತ್ತಿರುವ ಸಂದರ್ಭದಲ್ಲಿ ಮುಷ್ಕರ ಬೇಡ ಎಂದು ಕೋಡಿಹಳ್ಳಿ ಚಂದ್ರಶೇಖರ್ ಅವರಿಗೆ ಮನವಿ ಮಾಡಿದ್ದರು.

ಬೊಮ್ಮಾಯಿ ಜೊತೆಗಿನ ಮಾತುಕತೆಯ ನಂತರ ನೌಕರರಿಗೆ ಶೇ.10ರಷ್ಟು ವೇತನ ಹೆಚ್ಚಾಗಲಿದೆ. ಆರನೇ ವೇತನ ಆಯೋಗದ ಶಿಫಾರಸಿನ ಬಗ್ಗೆ ಸಿಎಂ ಮತ್ತು ಸಾರಿಗೆ ಸಚಿವರ ಜೊತೆ ಮಾತುಕತೆ ನಡೆಸಿ, ಜಾರಿಗೊಳಿಸುವ ಬಗ್ಗೆ ಬೊಮ್ಮಾಯಿಯವರು ಭರವಸೆ ನೀಡಿದ್ದಾರೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದರು.

ಆದರೆ, ಅಂತಹಯಾವ ಭರವಸೆಯನ್ನು ಸರ್ಕಾರ ನೀಡಿಲ್ಲ ಎಂದು ಬೊಮ್ಮಾಯಿ ಸ್ಪಷ್ಟಪಡಿಸಿದ್ದರು. ಈ ಎಲ್ಲಾ ಗೊಂದಲಗಳ ನಡುವೆ ನಾಳೆಯಿಂದ ಸಾರಿಗೆ ನೌಕರರು ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.

ಇತ್ತೀಚಿನ ಸುದ್ದಿ