ಶಿಥಿಲಾವಸ್ಥೆಯ ಮನೆಯಲ್ಲಿ ಮತದಾನ ಮಾಡಿದ 104 ವರ್ಷದ ವೃದ್ಧೆ: ಅಧಿಕಾರಿಗಳಿಗೆ ಸಾರ್ವಜನಿಕರಿಂದ ತರಾಟೆ
ಮಡಿಕೇರಿ: ಕೊಡಗು ಜಿಲ್ಲೆಯ ಕೂಡಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಿಥಿಲಾವಸ್ಥೆಯ ಮನೆಯೊಂದರಲ್ಲಿ 104 ವರ್ಷ ವಯಸ್ಸಿನ ಮಹಿಳೆಯೊಬ್ಬರು ಮಂಗಳವಾರ ಮತದಾನ ಮಾಡಿದ್ದು, ಮತದಾನದ ಬೆನ್ನಲ್ಲೇ ಅಧಿಕಾರಿಗಳನ್ನು ಸಾರ್ವಜನಿಕರು ತರಾಟೆಗೆತ್ತಿಕೊಂಡಿದ್ದಾರೆ.
104 ವರ್ಷದ ಕಾಳಮ್ಮ ಅವರು ಕುಸಿಯುವ ಹಂತದಲ್ಲಿದ್ದ ಮನೆಯಲ್ಲಿ ಮತದಾನ ಮಾಡಿದ್ದಾನೆ. ಈ ಬಗ್ಗೆ ಕೊಡಗು ಜಿಲ್ಲಾಧಿಕಾರಿ ತನ್ನ ಫೇಸ್ ಬುಕ್ ಖಾತೆಯಲ್ಲಿ ಚಿತ್ರ ಹಂಚಿಕೊಂಡಿದ್ದರು. ಈ ಚಿತ್ರವನ್ನು ನೋಡಿದ ಸಾರ್ವಜನಿಕರು, ಇವರ ಮನೆಯ ಪರಿಸ್ಥಿತಿ ನೋಡಿ ಮತ ಹಾಕಿಸಿಕೊಳ್ಳಲು ನಿಮಗೆ ಹೇಗೆ ಮನಸ್ಸು ಬಂತು ಎಂದು ಜಿಲ್ಲಾಧಿಕಾರಿಯನ್ನು ತರಾಟೆಗೆತ್ತಿಕೊಂಡಿದ್ದಾರೆ.
ಇನ್ನೂ ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್, ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಮಹಿಳೆಯ ಮನೆಗೆ ತೆರಳಿದ್ದ ಅಧಿಕಾರಿಗಳ ಹೇಳಿಕೆ ಪ್ರಕಾರ, ಇವರು ತಾತ್ಕಾಲಿಕವಾಗಿ ಈ ಮನೆಯಲ್ಲಿ ವಾಸವಿದ್ದಾರೆ. ಈ ಮನೆಯ ಹಿಂದೆ ಬೇರೊಂದು ಮನೆ ಕಟ್ಟಿಸುತ್ತಿದ್ದಾರೆ. ಚುನಾವಣೆ ಮುಗಿದ ಮೇಲೆ ಈ ಬಗ್ಗೆ ಕೂಲಂಕುಷವಾಗಿ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw