ವಯನಾಡ್ ಗುಡ್ಡ ಕುಸಿತ ದುರಂತದಲ್ಲಿ ಕೊಡಗು ಜಿಲ್ಲೆಯ 9 ವರ್ಷದ ಬಾಲಕ ಸಾವು
ಕೊಡಗು: ಕೇರಳದಲ್ಲಿ ನಡೆದ ಭೀಕರ ಗುಡ್ಡ ಕುಸಿತ ಘಟನೆಯಲ್ಲಿ ಅದರಂತೆ ಕರ್ನಾಟಕದ ಕೊಡಗು ಜಿಲ್ಲೆಯ ವಿರಾಜಪೇಟೆಯ ಬಾಲಕನೊಬ್ಬ ಬಲಿಯಾಗಿರುವ ದುಃಖಕರ ಘಟನೆ ಬೆಳಕಿಗೆ ಬಂದಿದೆ.
ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮಿಪದ ಗುಹ್ಯ ಗ್ರಾಮದ ರೋಹಿತ್(9) ಮೃತಪಟ್ಟ ಬಾಲಕನಾಗಿದ್ದಾನೆ. ಈತ ತಾಯಿಯ ಜೊತೆಗೆ ವಯನಾಡಿನಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದ ಎಂದು ತಿಳಿದು ಬಂದಿದೆ.
ಇನ್ನೂ ರೋಹಿತ್ ನ ತಾಯಿಯ ಮೊಬೈಲ್ ಸ್ವಿಚ್ಡ್ ಆಫ್ ಆಗಿದ್ದು, ಈ ಹಿನ್ನೆಲೆಯಲ್ಲಿ ಕವಿತಾ ಅವರ ಪತಿ ರವಿ ವಯನಾಡಿಗೆ ತೆರಳಿದ್ದಾರೆ.
ರೋಹಿತ್ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಗುಯ್ಯ ಸರ್ಕಾರಿ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿದ್ದ. ಶಾಲೆಗೆ ರಜೆ ಇದ್ದ ಕಾರಣ ಕೇರಳದ ಮೇಪಾಡಿಯ ಸಂಬಂಧಿಕರ ಮನೆಗೆ ತೆರಳಿದ್ದ. ಇದೀಗ ಅನಿರೀಕ್ಷಿತ ದುರಂತಕ್ಕೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾನೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth