42 ವರ್ಷಗಳ ಹಿಂದೆ 10 ದಲಿತರನ್ನು ಹತ್ಯೆ ಮಾಡಿದ 90 ವರ್ಷದ ವ್ಯಕ್ತಿಗೆ ಜೀವಾವಧಿ ಶಿಕ್ಷೆ
42 ವರ್ಷಗಳ ಹಿಂದೆ 10 ದಲಿತರನ್ನು ಹತ್ಯೆ ಮಾಡಿದ 90 ವರ್ಷದ ವ್ಯಕ್ತಿಯನ್ನು ದೋಷಿ ಎಂದು ಗುರುವಾರ ಘೋಷಿಸಿದ ಫಿರೋಜಾಬಾದ್ ಜಿಲ್ಲಾ ನ್ಯಾಯಾಲಯ, ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.
42 ವರ್ಷಗಳ ಹಿಂದೆ ನಡೆದ ಈ ಹತ್ಯೆಗಳು ದೇಶಾದ್ಯಂತ ತೀವ್ರ ಸಂಚಲನ ಸೃಷ್ಟಿಸಿತ್ತು. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಜಿಲ್ಲಾ ಕೋರ್ಟ್, ಜೀವಂತವಾಗಿರುವ ಏಕೈಕ ಅಪರಾಧಿ ಗಂಗಾ ದಯಾಳ್ಗೆ ಜೀವಾವಧಿ ಶಿಕ್ಷೆ ಹಾಗೂ 55,000 ರೂ. ದಂಡ ವಿಧಿಸಿದೆ. ದಂಡ ಪಾವತಿಸಲು ತಪ್ಪಿದಲ್ಲಿ ಆರೋಪಿ 13 ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ.
1981ರಲ್ಲಿ ಸದುಪುರ ಗ್ರಾಮದಲ್ಲಿ ನಡೆದ ಹಿಂಸಾಚಾರದಲ್ಲಿ 10 ದಲಿತರನ್ನು ನಿರ್ದಯವಾಗಿ ಹತ್ಯೆ ಮಾಡಲಾಗಿತ್ತು. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಹತ್ತು ಮಂದಿಯನ್ನು ಆರೋಪಿಗಳೆಂದು ಗುರುತಿಸಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw