ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರು ಡಿಕ್ಕಿ: ಮೂವರು ಕಾರ್ಮಿಕರು ಸಾವು - Mahanayaka

ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರು ಡಿಕ್ಕಿ: ಮೂವರು ಕಾರ್ಮಿಕರು ಸಾವು

sullia
31/08/2023

ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಅಡ್ಕಾರಿನಲ್ಲಿ ನಡೆದಿದೆ.

ಮೃತ ಕಾರ್ಮಿಕರನ್ನು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿಗಳಾದ ಚಂದ್ರಪ್ಪ, ರೇಗಪ್ಪ, ಮಾಂತೇಶ್ ಎಂದು ಗುರುತಿಸಲಾಗಿದೆ. ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಚಂದ್ರಪ್ಪ, ರೇಗಪ್ಪ, ವೆಂಕಪ್ಪ, ಮಾಂತೇಶ್ ಎಂಬವರಿಗೆ ಡಿಕ್ಕಿಯಾಗಿದ್ದಲ್ಲದೇ ಪಕ್ಕದಲ್ಲಿ ನಿಂತಿದ್ದ ಲಾರಿಗೂ ಡಿಕ್ಕಿ ಹೊಡೆದಿದೆ.

ಗಂಭೀರ ಗಾಯಗೊಂಡಿದ್ದ ಮೂವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ವೆಂಕಪ್ಪ ಚಿಕಿತ್ಸೆ ಪಡೆಯುತ್ತಿದ್ದಾರೆ‌ ಎಂದು ತಿಳಿದುಬಂದಿದೆ.

ಇತ್ತೀಚಿನ ಸುದ್ದಿ