ಅಶ್ವತ್ಥ್ ನಾರಾಯಣ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿ ಬಂಧಿಸಿ: ವೆರೋನಿಕಾ ಕರ್ನೆಲಿಯೋ ಆಗ್ರಹ
ರಾಜ್ಯದ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಿ ಎನ್ನುವ ಮೂಲಕ ಪ್ರಚೋದನಾತ್ಮಕವಾಗಿ ಮಾತನಾಡಿದ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಅವರ ವಿರುದ್ದ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಸ್ವಯಂ ಪ್ರೇರಿತ ದೂರು ದಾಖಲಿಸಿ ಬಂಧಿಸಬೇಕು ಎಂದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೋ ಆಗ್ರಹಿಸಿದ್ದಾರೆ.
ರಾಜ್ಯಕ್ಕೆ ಉತ್ತಮ ಜನಪರ ಆಡಳಿತ ನೀಡಿರುವ ಹಿರಿಯ ರಾಜಕಾರಣಿ ಸಿದ್ದರಾಮಯ್ಯ ಅವರ ವಿರುದ್ದ ಸಚಿವ ಡಾ|ಸಿ ಎನ್ ಅಶ್ವಥ್ ನಾರಾಯಣ್ ಮಾತನಾಡಿದ ಪದಗಳನ್ನು ಯಾರೂ ಕೂಡ ಒಪ್ಪುವಂತದಲ್ಲ. ಬಿಜೆಪಿ ಪಕ್ಷದವರು ಏನೇ ಮಾತನಾಡಿದರೂ ನಡೆಯುತ್ತದೆ ಎಂಬ ಅಹಂಕಾರದ ವರ್ತನೆ ಅವರ ಮಾತುಗಳಲ್ಲಿ ಎದ್ದು ಕಾಣುತ್ತದೆ. ರಾಜಕೀಯ ವಿಚಾರಗಳಲ್ಲಿ ಪರ ವಿರೋಧ ಮಾಡುವುದನ್ನು ಬಿಟ್ಟು ಹೊಡೆದು ಸಾಯಿಸಿ ಎಂಬ ಪ್ರಚೋದನಾತ್ಮಕ ಪದ ಬಳಸಿರುವುದು ಅವರ ಕೀಳು ಮನಸ್ಥಿತಿಯನ್ನು ಎತ್ತಿ ತೋರಿಸುತ್ತದೆ.
ಬಿಜೆಪಿಯ ಜಗದೀಶ್ ಶೆಟ್ಟರ್, ಯಡಿಯೂರಪ್ಪ, ಆರ್ ಅಶೋಕ್, ಬಸವರಾಜ ಬೊಮ್ಮಾಯಿ ಸಹಿತ ಹಲವು ಬಿಜೆಪಿಗರು ಟಿಪ್ಪು ಸುಲ್ತಾನ್ ಅವರನ್ನು ಹಲವು ವೇದಿಕೆಗಳಲ್ಲಿ ಹೊಗಳಿದ ದಾಖಲೆಗಳಿದ್ದು ಅದೇ ಕೆಲಸವನ್ನು ಸಿದ್ದರಾಮಯ್ಯ ಮಾಡಿದರೆ ಇವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ ಎನ್ನುವುದು ಇವರ ಇಬ್ಬಗೆ ಧೋರಣೆಯನ್ನು ಎತ್ತಿತೋರಿಸುತ್ತದೆ. ಒಮ್ಮೆ ಪ್ರಚೋದನಾತ್ಮಕ ಹೇಳಿಕೆ ನೀಡಿ ಬಳಿಕ ಕ್ಷಮೆ ಕೇಳುವ ನಾಟಕ ಮಾಡಿದರೆ ಅವರು ಆಡಿದ ಮಾತು ಮರೆತು ಹೋಗುವುದಿಲ್ಲ. ಒಬ್ಬ ಸಚಿವರಾಗಿ ಇಂತಹ ಹೇಳಿಕೆ ನೀಡಿದ ಅಶ್ವಥ್ ನಾರಾಯಣ್ ಅವರನ್ನು ಬೊಮ್ಮಾಯಿ ಕೂಡಲೇ ಸಂಪುಟದಿಂದ ವಜಾಗೊಳಿಸಬೇಕು ಮತ್ತು ಅವರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw