ಪ್ರೇಯಸಿಯ ಕತ್ತು ಸೀಳಿ ಕೊಂದು ಆತ್ಮಹತ್ಯೆಗೆ ಶರಣಾದ ಪಾಗಲ್ ಪ್ರೇಮಿ!

ಬೆಳಗಾವಿ: ಪ್ರೇಯಸಿಯ ಕತ್ತು ಸೀಳಿ ಹತ್ಯೆ ನಡೆಸಿದ ಪ್ರೇಮಿಯೊಬ್ಬ, ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಶಹಾಪುರದ ನವಿ ಗಲ್ಲಿಯಲ್ಲಿ ನಡೆದಿದೆ.
ಯಳ್ಳೂರು ಗ್ರಾಮದ ಪ್ರಶಾಂತ ಯಲ್ಲಪ್ಪ ಕುಂಡೇಕರ(29) ದುಷ್ಕೃತ್ಯ ಎಸಗಿದ ವ್ಯಕ್ತಿಯಾಗಿದ್ದು, ಕೃತ್ಯದ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಘಟನೆಯ ವಿವರ:
ಪೈಂಟಿಂಗ್ ಕೆಲಸ ಮಾಡುತ್ತಿದ್ದ ಪ್ರಶಾಂತ ಕಳೆದ ಒಂದೂವರೆ ವರ್ಷದಿಂದ ಹುಡುಗಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆ ಹುಡುಗಿಯನ್ನು ಮದುವೆ ಮಾಡಿಕೊಡುವಂತೆ ಕೇಳಿದಾಗ, ಯುವತಿಯ ತಾಯಿ, ಚೆನ್ನಾಗಿ ಕೆಲಸ ಮಾಡಿ ಸಂಬಳ ಹೆಚ್ಚು ತೆಗೆದುಕೋ ಎಂದು ಬುದ್ಧಿವಾದ ಹೇಳಿ ಕಳುಹಿಸಿದ್ದರು ಎನ್ನಲಾಗಿದೆ.
ಇದರಿಂದ ಬೇಸರಗೊಂಡ ಪ್ರಶಾಂತ, ತನ್ನ ಪ್ರೇಯಸಿಯನ್ನು ಆಕೆಯ ಚಿಕ್ಕಮ್ಮನ ಮನೆಗೆ ಕರೆಸಿಕೊಂಡಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿಷ ಕುಡಿಸಲು ಯತ್ನಿಸಿದ್ದಾನೆ ಬಳಿಕ ಚಾಕುವಿನಿಂದ ಕತ್ತು ಸೀಳಿ, ಅದೇ ಚಾಕುವಿನಿಂದ ತಾನೂ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಯ ನಂತರ ಪೋಷಕರಿಗೆ ಪೊಲೀಸರು ಹಸ್ತಾಂತರಿಸಿದ್ದಾರೆ. ಘಟನೆ ಸಂಬಂಧ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: