ಅಸಲಿ..? ಕೇರಳದಲ್ಲಿ ಕಮಲದ ಚಿಹ್ನೆಯೊಂದಿಗೆ ತಲಾ ಒಂದು ಹೆಚ್ಚುವರಿ ಸ್ಲಿಪ್ ಮುದ್ರಿಸಿದ ಮೂರು ವಿವಿ ಪ್ಯಾಟ್ ಗಳು..!

ಕೇರಳದ ಕಾಸರಗೋಡಿನಲ್ಲಿ ಬುಧವಾರ ಅಣಕು ಮತದಾನದ ಸಂದರ್ಭದಲ್ಲಿ ಮೂರು ವಿವಿ ಪ್ಯಾಟ್ ಗಳು ಕಮಲದ ಚಿಹ್ನೆಯೊಂದಿಗೆ ತಲಾ ಒಂದು ಹೆಚ್ಚುವರಿ ಸ್ಲಿಪ್ ಮುದ್ರಿಸಿವೆ.
ವಿದ್ಯುನ್ಮಾನ ಮತಯಂತ್ರಗಳು ‘ಮನುಷ್ಯನ ಹಸ್ತಕ್ಷೇಪ’ ಇಲ್ಲದಿದ್ದರೆ ನಿಖರವಾದ ಫಲಿತಾಂಶ ನೀಡುತ್ತವೆ ಎಂದು ಸುಪ್ರೀಂ ಕೋರ್ಟ್ ಹೇಳಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ.
ವಿವಿಪ್ಯಾಟ್ ಲೋಪದ ಬಗ್ಗೆ ಕಾಂಗ್ರೆಸ್ ಮತ್ತು ಸಿಪಿಐ (ಎಂ) ಪ್ರಶ್ನೆ ಎತ್ತಿದ್ದು, ಚುನಾವಣಾ ಆಯೋಗದ ಅಧಿಕಾರಿಗಳು ದೋಷಗಳನ್ನು ಪರಿಶೀಲಿಸಿ ಯಂತ್ರಗಳನ್ನು ಬದಲಾಯಿಸುವಂತೆ ಒತ್ತಾಯಿಸಿದ್ದಾರೆ.
ಎರಡೂ ಬಾರಿ ಪರಿಶೀಲಿಸಿದಾಗಲೂ ಮೂರು ವಿವಿ ಪ್ಯಾಟ್‌ಗಳು ಬಿಜೆಪಿ ಚಿಹ್ನೆಯಿರುವ ತಲಾ ಒಂದೊಂದು ಹೆಚ್ಚುವರಿ ಸ್ಲಿಪ್ ಮುದ್ರಿಸಿವೆ. ಕಾಂಗ್ರೆಸ್ ಅಭ್ಯರ್ಥಿ ರಾಜಮೋಹನ್ ಉನ್ನಿತಾನ್ ಅವರ ಚುನಾವಣಾ ಏಜೆಂಟ್ ನಾಸರ್ ಚೆರ್ಕಳಂ ಅವರ ಪ್ರಕಾರ, ಮೂರನೇ ಸುತ್ತಿನ ಪರಿಶೀಲನೆ ವೇಳೆ ಸಮಸ್ಯೆಯನ್ನು ಸರಿಪಡಿಸಲಾಗಿದೆ.
ಕಾಸರಗೋಡಿನಲ್ಲಿ ವಿವಿಪ್ಯಾಟ್ ಪರಿಶೀಲನೆ ವೇಳೆ ಬಿಜೆಪಿ ಚಿಹ್ನೆಯ ಸ್ಲಿಪ್ ಬಂದಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಪರಿಶೀಲನೆ ನಡೆಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಭಾರತೀಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth