ಉರುಳಿ ಬಿದ್ದ ಶಿಥಿಲಾವಸ್ಥೆಯಲ್ಲಿದ್ದ ವಿದ್ಯುತ್ ಕಂಬ: ಮಹಿಳೆಗೆ ಗಂಭೀರ ಗಾಯ

ಹಾಸನ: ಶಿಥಿಲಗೊಂಡಿದ್ದ ವಿದ್ಯುತ್ ಕಂಬವೊಂದು ಮುರಿದು ಬಿದ್ದು ಪರಿಣಾಮ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದ ಗಾಳಿಗುಡ್ಡ ಗ್ರಾಮದಲ್ಲಿ ನಡೆದಿದೆ.
ಶಾರದಾ(45) ಗಂಭೀರವಾಗಿ ಗಾಯಗೊಂಡಿರುವ ಮಹಿಳೆಯಾಗಿದ್ದಾರೆ. ಮನೆಯಿಂದ ಹೊರ ಬಂದ ವೇಳೆ ಏಕಾಏಕಿ ಕಂಬವೊಂದು ಶಾರದಾ ಅವರ ಮೇಲೆ ಮುರಿದುಬಿದ್ದಿದ್ದು, ಪರಿಣಾಮವಾಗಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ವಿದ್ಯುತ್ ಕಂಬ ಶಿಥಿಲವಾಗಿದೆ, ಅದನ್ನು ಬದಲಿಸಿ ಎಂದು ಚೆಸ್ಕಾಂಗೆ ಹಲವು ಬಾರಿ ಸಾರ್ವಜನಿಕರು ಮನವಿ ಮಾಡಿದ್ದರು. ಆದರೆ ವಿದ್ಯುತ್ ಕಂಬವನ್ನು ಬದಲಿಸದೇ ಅಧಿಕಾರಿಗಳು ಹಾಗೂ ನೌಕರರ ನಿರ್ಲಕ್ಷ್ಯ ತೋರಿಸಿರುವ ಕಾರಣ ಈ ದುರ್ಘಟನೆ ನಡೆದಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ನಿರ್ಲಕ್ಷ್ಯ ವಹಿಸಿರುವ ಅಧಿಕಾರಿಗಳ ವಿರುದ್ಧ ತಕ್ಷಣವೇ ಕಾನೂನುಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: