ಎರಡು ಕುಟುಂಬಗಳ ನಡುವೆ ಹೊಡೆದಾಟ: ಪೊಲೀಸರ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ - Mahanayaka

ಎರಡು ಕುಟುಂಬಗಳ ನಡುವೆ ಹೊಡೆದಾಟ: ಪೊಲೀಸರ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

crime news
09/10/2023

ಚಾಮರಾಜನಗರ: ವೈಯಕ್ತಿಕ ಕಾರಣಗಳಿಂದ ಎರಡು ಮುಸ್ಲಿಂ ಕುಟುಂಬಗಳ ನಡುವೆ ಗಲಾಟೆ ನಡೆದಿದ್ದು, ಪರಸ್ಪರ ಹೊಡೆದಾಟದಲ್ಲಿ 6 ಜನರಿಗೆ ಗಾಯಗಳಾಗಿವೆ.

ಚಾಮರಾಜನಗರದ ಕೆ.ಪಿ.ಮೊಹಲ್ಲಾದಲ್ಲಿ ಘಟನೆ ನಡೆದಿದೆ.  ಒಂದು ಕಡೆಯವರು ಮತ್ತೊಂದು ಕಡೆಯವರ ಮನೆಯ ಬಾಗಿಲು ಮುರಿದು ಒಳ ನುಗ್ಗಿ ಹೊಡೆದಾಟ ನಡೆಸಿದ್ದಾರೆನ್ನಲಾಗಿದೆ. ಘಟನೆಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ.

ಗಲಾಟೆಯ ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ. ಪೊಲೀಸರ ಸಮಯ ಪ್ರಜ್ಞೆಯಿಂದಾಗಿ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.  ಘಟನಾ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಸದ್ಯ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಬಿಗಿ ಭದ್ರತೆಗೆ ಕ್ರಮಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ