ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಯುವಕನ ಬರ್ಬರ ಹತ್ಯೆಯಲ್ಲಿ ಅಂತ್ಯ!
ಮೈಸೂರು: ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ 18 ವರ್ಷದ ಯುವಕನ ಬರ್ಬರ ಹತ್ಯೆಯಲ್ಲಿ ಕೊನೆಗೊಂಡ ಘಟನೆ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿನಗರದಲ್ಲಿ ನಡೆದಿದ್ದು, ಈ ಭೀಕರ ಕೊಲೆಗೆ ಮೈಸೂರು ಬೆಚ್ಚಿಬಿದ್ದಿದೆ.
ಅರ್ಬಾಜ್ ಖಾನ್ (18) ಹತ್ಯೆಗೀಡಾದ ಯುವಕನಾಗಿದ್ದು, ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಗುರಾಯಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ಆರಂಭವಾಗಿದ್ದು, ಪ್ರಮುಖ ಆರೋಪಿ ಶಹಬಾಜ್ ಸೇರಿದಂತೆ ನಾಲ್ವರು ಸೇರಿ ಅರ್ಬಾಜ್ ಖಾನ್ ನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಹತ್ಯೆಯ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿಡಿಯೋ ನೋಡಿ ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ.
ಶಾಂತಿನಗರದ ಲಾಲ್ ಮಸೀದಿ ಬಳಿ ಅರ್ಬಾಜ್ ಖಾನ್ ಗುರಾಯಿಸಿದ ಎಂದು ಗಲಾಟೆ ಶುರುವಾಗಿ ಕೊಲೆಯಲ್ಲಿ ಅಂತ್ಯವಾಗಿದೆ. ಗಲಾಟೆ ವೇಳೆ ಪ್ರಮುಖ ಆರೋಪಿ ಶಹಬಾಜ್ ಗೂ ಗಾಯಗಳಾಗಿವೆ. ಘಟನೆ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: