ನಕ್ಸಲರ ದಾಳಿಗೆ ಬಲಿಯಾದ ಭದ್ರತಾ ಸಿಬ್ಬಂದಿಗೆ ಅಂತಿಮ ನಮನ
ದಾಂತೇವಾಡ: ಛತ್ತೀಸ್ ಗಢದ ದಾಂತೇವಾಡ ಜಿಲ್ಲೆಯಲ್ಲಿ ನೆನ್ನೆ ನಕ್ಸಲರ ದಾಳಿಗೆ ಬಲಿಯಾದ 11 ಮಂದಿ ಭದ್ರತಾ ಸಿಬ್ಬಂದಿಗೆ ಅಂತಿಮ ನಮನ ಸಲ್ಲಿಸಲಾಯಿತು.
ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಹುತಾತ್ಮರಾದ ಭದ್ರತಾ ಸಿಬ್ಬಂದಿಯ ಪಾರ್ಥೀವ ಶರೀರಕ್ಕೆ ಹೆಗಲು ಕೊಡುವುದರ ಮೂಲಕ ಅಂತಿಮ ನಮನ ಸಲ್ಲಿಸಿದ್ದರು. ಈ ವೇಳೆ ಮಾತನಾಡಿದ ಅವರು, ಹುತಾತ್ಮರ ಬಲಿದಾನ ವ್ಯರ್ಥವಾಗುವುದಿಲ್ಲ. ನಕ್ಸಲರ ವಿರುದ್ದದ ಹೋರಾಟ ತೀವ್ರಗೊಳಿಸುವುದಾಗಿ ಹೇಳಿದರು.
ಕಳೆದ ನಾಲ್ಕು ವರ್ಷಗಳಲ್ಲಿ, ನಕ್ಸಲರ ಪ್ರಮುಖ ಪ್ರದೇಶಗಳಲ್ಲಿ 75 ಶಿಬಿರಗಳನ್ನು (ಭದ್ರತಾ ಪಡೆ) ಸ್ಥಾಪಿಸಲಾಗಿದೆ. ನಮ್ಮ ಯೋಧರು ನಕ್ಸಲ್ ಪೀಡಿತ ಪ್ರಮುಖ ಪ್ರದೇಶಗಳಲ್ಲಿ ಕಠಿಣ ಹೋರಾಟವನ್ನು ಮಾಡುವುದಾಗಿ ಎಂದು ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw