35 ಅಡಿ ಆಳದ ಬಾವಿಗೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಅಗ್ನಿಶಾಮಕ ದಳ
ಉಡುಪಿ: 35 ಅಡಿ ಆಳದ ಬಾವಿಗೆ ಬಿದ್ದು ಮೂಳೆ ಮುರಿತಕ್ಕೆ ಒಳಗಾದ ವ್ಯಕ್ತಿಯೊಬ್ಬರನ್ನು ಉಡುಪಿ ಅಗ್ನಿಶಾಮಕ ದಳದವರು ರಕ್ಷಿಸಿರುವ ಘಟನೆ ಇಂದು ಬೆಳಗ್ಗೆ ಉದ್ಯಾವರ ಸಂಪಿಗೆನಗರ ಎಂಬಲ್ಲಿ ನಡೆದಿದೆ.
ಸಂಪಿಗೆನಗರ ಮಾಗೋಡು ದೇವಸ್ಥಾನದ ಸಮೀಪದ ನಿವಾಸಿ ಶಶೀಂದ್ರ(54) ಎಂಬವರು ಅಕಸ್ಮಿಕವಾಗಿ ಕಾಲು ಜಾರಿ ಮನೆ ಸಮೀಪದ ಬಾವಿಗೆ ಬಿದ್ದರೆನ್ನಲಾಗಿದೆ. ಸ್ಥಳೀಯರು ನೀಡಿದ ಮಾಹಿತಿಯಂತೆ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದರು. ಅಗ್ನಿಶಾಮಕ ಠಾಣಾಧಿಕಾರಿ ಸತೀಶ್ ಎನ್. ಮಾರ್ಗದರ್ಶನದಂತೆ ಅಗ್ನಿಶಾಮಕ ಸಿಬ್ಬಂದಿ ರವಿ ನಾಯ್ಕ ಹಗ್ಗದ ಸಹಾಯ ದಿಂದ ಬಾವಿಗೆ ಇಳಿದು ಬಾವಿಯೊಳಗೆ ನೋವಿನಿಂದ ನರಳಾಡುತ್ತಿದ್ದ ಶಶೀಂದ್ರ ಅವರನ್ನು ಮೇಲಕ್ಕೆ ಎತ್ತಿದರು.
ಬಳಿಕ ಅವರನ್ನು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಒಳರೋಗಿಯಾಗಿ ದಾಖಲಿಸಲಾಯಿತು. ಈ ಕಾರ್ಯಾಚರಣೆಯಲ್ಲಿ ಅಗ್ನಿ ಶಾಮಕದಳದ ಸಿಬ್ಬಂದಿಗಳಾದ ರಾಘವೇಂದ್ರ ಆಚಾರಿ, ತೌಸಿಫ್ ಅಹ್ಮದ್, ಗಣೇಶ್ ವಿ., ಮುಸಿದ್ದೀಕ್ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw