ಮಲೆ ಮಾದೇಶ್ವರ ಬೆಟ್ಟಕ್ಕೆ ಬಂದು ಗ್ರಾಮಕ್ಕೆ ಹಿಂದಿರುಗುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ!
ಹನೂರು :ವ್ಯಕ್ತಿಯೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ ಗಾಯಗೊಂಡು ಮೈಸೂರಿನ ಕೆ ಆರ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಘಟನೆ ಜರುಗಿದೆ. ತಾಲೂಕಿನ ಕೊಕ್ಕಬರೆ ಗ್ರಾಮದ ಪುಟ್ಟಸ್ವಾಮಿ ಗಾಯಗೊಂಡ ವ್ಯಕ್ತಿಯಾಗಿದ್ದಾರೆ.
ಘಟನೆ ವಿವರ: ಕಾರ್ಯನಿಮಿತ್ತ ಮಲೆ ಮಾದೇಶ್ವರ ಬೆಟ್ಟಕ್ಕೆ ಆಗಮಿಸಿ ನಂತರ ಬುಧವಾರ ಸಂಜೆ 7 ಗಂಟೆಯ ಸಮಯದಲ್ಲಿ ಕೊಕ್ಕಬರೆ ಗ್ರಾಮಕ್ಕೆ ನಡೆದುಕೊಂಡು ತೆರಳುತ್ತಿದ್ದ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ.
ಆನೆ ದಾಳಿಯ ಪರಿಣಾಮ ಪುಟ್ಟಸ್ವಾಮಿ ಅವರ ಎರಡೂ ಕಾಲಿನ ಮೂಳೆ ಮುರಿದಿರುವುದರಿಂದ ತೀವ್ರ ಗಾಯಗೊಂಡಿದ್ದಾರೆ. ಮಾಹಿತಿ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಕೆಆರ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka