ರೈಲ್ವೇ ಕಾಮಗಾರಿಗೆ ತೆಗೆದಿಟ್ಟಿದ್ದ ಗುಂಡಿಗೆ ಬಿದ್ದು ಬಾಲಕಿ ಸಾವು! - Mahanayaka
8:25 PM Wednesday 11 - December 2024

ರೈಲ್ವೇ ಕಾಮಗಾರಿಗೆ ತೆಗೆದಿಟ್ಟಿದ್ದ ಗುಂಡಿಗೆ ಬಿದ್ದು ಬಾಲಕಿ ಸಾವು!

chaithra
08/11/2023

ಶಿವಮೊಗ್ಗ: ರೈಲ್ವೆ ಕಾಮಗಾರಿಗೆ ರಸ್ತೆ ಮಧ್ಯೆ ತೆಗೆಯಲಾಗಿದ್ದ ಗುಂಡಿಗೆ ಬಿದ್ದು ಬಾಲಕಿಯೋರ್ವಳು ದಾರುಣವಾಗಿ ಸಾವಿಗೀಡಾದ ಘಟನೆ ಶಿವಮೊಗ್ಗದ ಕೋಟೆಗಂಗೂರಿನಲ್ಲಿ ನಡೆದಿದೆ.

5ನೇ ತರಗತಿ ವಿದ್ಯಾರ್ಥಿನಿ ಚೈತ್ರಾ ಮೃತಪಟ್ಟ ಬಾಲಕಿಯಾಗಿದ್ದಾಳೆ. ಶಾಲೆ ಮುಗಿಸಿ ಬಂದಿದ್ದ ಬಾಲಕಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ತಂದೆ ತಾಯಿಯ ಬಳಿಯಿದ್ದ ಮನೆಯ ಬೀಗದ ಕೀ ಪಡೆದುಕೊಂಡು ವಾಪಸ್ ಬರುತ್ತಿದ್ದ ವೇಳೆ ರೈಲ್ವೇ ಕಾಮಗಾರಿಗೆ ತೆಗೆಯಲಾಗಿದ್ದ ಗುಂಡಿಗೆ ಬಿದ್ದಿದ್ದಾಳೆ.

ಗುಂಡಿಯಲ್ಲಿ ನೀರು ತುಂಬಿದ್ದರಿಂದಾಗಿ ಮೇಲೆ ಬರಲು ಸಾಧ್ಯವಾಗದೇ ಬಾಲಕಿ ಮೃತಪಟ್ಟಿದ್ದಾಳೆ. ಬಾಲಕಿ ತಂದೆ ತಾಯಿ ಕೆಲಸ ಮುಗಿಸಿ ಮನೆಗೆ ಬಂದ ವೇಳೆ ಬಾಲಕಿ ಕಾಣದಿದ್ದಾಗ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಗುಂಡಿಗೆ ಬಿದ್ದು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

ಕಾಮಗಾರಿಗೆ ಗುಂಡಿ ತೆಗೆದು ಸಾರ್ವಜನಿಕರ ಸುರಕ್ಷತೆಯನ್ನು ನಿರ್ಲಕ್ಷ್ಯವಹಿಸಿದ ಪರಿಣಾಮ ಬಾಲಕಿಯೊಬ್ಬಳು ಬಲಿಯಾಗಿದ್ದಾಳೆ. ಗುತ್ತಿಗೆದಾರನ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ