ಚಾಕುವಿನಿಂದ ಇರಿಯುವುದಾಗಿ ಬೆದರಿಸಿ ಬಾಲಕಿಯ ಮೇಲೆ ಶಾಲಾ ಆವರಣದಲ್ಲೇ ಲೈಂಗಿಕ ದೌರ್ಜನ್ಯ!
ಮಂಡ್ಯ: ಸರ್ಕಾರಿ ಶಾಲೆಯ ಆವರಣದಲ್ಲೇ 8 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆಯೊಂದು ಮಂಡ್ಯ ನಗರದ ಹೊರವಲಯದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಜನವರಿ 31ರಂದು ಈ ಘಟನೆ ನಡೆದಿದೆ. ಕೇಕ್ ಕೊಡಿಸಿ, ಬಾಲಕಿಗೆ ಚಾಕು ಹಾಕುವುದಾಗಿ ಹೆದರಿಸಿದ ಮೂವರು ಕಾಮುಕರು ಹಾಡಹಗಲೇ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದಾರೆ.
ಬಾಲಕಿ ಋತುಮತಿಯಾಗಿ 2 ದಿನ ಕಳೆದರೂ ಹೊಟ್ಟೆ ನೋವು, ರಕ್ತಸ್ರಾವ ನಿಲ್ಲದ ಹಿನ್ನೆಲೆ ಅನುಮಾನಗೊಂಡು ಬಾಲಕಿಯ ಚಿಕ್ಕಮ್ಮ ವಿಚಾರಿಸಿದಾಗ ನಡೆದ ಘಟನೆಯನ್ನು ಬಾಲಕಿ ತಿಳಿಸಿದ್ದು, ಇದರಿಂದಾಗಿ ಘಟನೆ ಬೆಳಕಿಗೆ ಬಂದಿದೆ.
ಅಸ್ವಸ್ಥಗೊಂಡಿರುವ ಬಾಲಕಿಯನ್ನು ಸದ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಆಗಮಿಸಿದ ಪೊಲೀಸರು ಬಾಲಕಿಯ ಆರೋಗ್ಯ ವಿಚಾರಿಸಿದ್ದು, ವೈದ್ಯರಿಂದ ಮಾಹಿತಿ ಪಡೆದುಕೊಂಡು ಮುಂದಿನ ಕ್ರಮಕ್ಕೆ ಮುಂದಾಗಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: