7 ವರ್ಷಗಳ ಹಿಂದೆ ಕೊಲೆಯಾಗಿದ್ದವಳು ಮರಳಿ ಬಂದಳು ! : ಕೊಲೆಗಾರ ಜೈಲಿನಲ್ಲಿದ್ದ!
7 ವರ್ಷಗಳ ಹಿಂದೆ ಕೊಲೆಯಾಗಿದ್ದವಳು ವಾಪಸ್ ಬಂದ್ಳು… ಕೊಲೆ ಮಾಡಿದವನು ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ. ಇದೀಗ ಈತ ನಿರಾಪರಾಧಿ ಎಂದು ಜೈಲಿನಿಂದ ಬಿಡುಗಡೆಗೊಂಡಿದ್ದಾನೆ.
ಹೌದು…! ಈ ವಿಚಿತ್ರ ಘಟನೆ ನಡೆದಿರುವುದು ಉತ್ತರ ಪ್ರದೇಶದಲ್ಲಿ. ಅಪ್ರಾಪ್ತೆಯಾಗಿದ್ದ ವೇಳೆ ಯುವತಿ ನಾಪತ್ತೆಯಾಗಿದ್ದಳು. ಆಕೆಯ ಶವ ಆಗ್ರಾದಲ್ಲಿ ಪತ್ತೆಯಾಗಿತ್ತು. ಆಕೆಯ ಮೃತದೇಹವನ್ನು ಆಕೆಯ ತಂದೆ ಪತ್ತೆ ಹಚ್ಚಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಷ್ಣು ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಈತನೇ ಯುವತಿಯನ್ನು ಕೊಂದಿದ್ದಾನೆ ಎಂದು 7 ವರ್ಷಗಳ ಹಿಂದೆ ಈತನಿಗೆ ಜೈಲು ಶಿಕ್ಷೆ ವಿಧಿಸಲಾಗಿತ್ತು.
ಇತ್ತ ವಿಷ್ಣು ಮಾಡದ ತಪ್ಪಿಗೆ ಜೈಲಿನಲ್ಲಿ ಕಾಲ ಕಳೆಯುತ್ತಿದ್ದರೆ. ಕೊಲೆಯಾಗಿದ್ದಾಳೆನ್ನಲಾಗಿದ್ದ ಯುವತಿ ತನ್ನ ಪ್ರಿಯಕರನೊಂದಿಗೆ ವಿವಾಹವಾಗಿ ಸುಖ ಜೀವನ ನಡೆಸುತ್ತಿದ್ದಳು. ಈ ವಿಚಾರ ಅದು ಹೇಗೋ ವಿಷ್ಣುನ ತಾಯಿಯ ಕಿವಿಗೆ ಬಿದ್ದಿತ್ತು. ಅವರು ನ್ಯಾಯ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು.
ನಂತರ ವಿಷ್ಣು ತಾಯಿಯ ಅರ್ಜಿಯಂತೆ ಘಟನೆಯ ಕುರಿತು ತನಿಖೆಗೆ ಆದೇಶಿಸಿದಾಗ ಪೊಲೀಸರು ಮಹಿಳೆಯನ್ನು ಅಲಿಘರ್ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಮತ್ತು ಆಕೆಯ ಗುರುತು ಪತ್ತೆಹಚ್ಚಲು ಡಿಎನ್‌ಎ ಪರೀಕ್ಷೆ ಮಾಡಿಸಿದರು. ಮಹಿಳೆಯ ತಂದೆ ಆಕೆಯನ್ನು ತನ್ನ ಮಗಳು ಎಂದು ಗುರುತಿಸಿದ್ದಾರೆ.
ಅಪ್ರಾಪ್ತೆಯಾಗಿದ್ದ ಈಕೆ 7 ವರ್ಷಗಳ ಹಿಂದೆ ತನ್ನ ಪ್ರಿಯಕರನೊಂದಿಗೆ ಓಡಿ ಹೋಗಿ ವಿವಾಹವಾಗಿದ್ದಳು. ಬಳಿಕ ಬೇರೆ ಪ್ರದೇಶದಲ್ಲಿ ನೆಲೆಸಿದ್ದಳು. ಆದರೆ, ಆಗ್ರಾದಲ್ಲಿ ಪತ್ತೆಯಾದ ಮೃತದೇಹವೊಂದನ್ನು ಆಕೆಯ ತಂದೆ ತನ್ನ ಮಗಳು ಎಂದು ಗುರುತಿಸಿದ್ದರಿಂದಾಗಿ ಇಷ್ಟೆಲ್ಲ ಯಡವಟ್ಟು ನಡೆದಿದೆ. ಇದೀಗ ಮಾಡದ ತಪ್ಪಿಗೆ ಯುವಕನೋರ್ವ ತನ್ನ ಅಮೂಲ್ಯವಾದ ಸಮಯವನ್ನು ಜೈಲಿನಲ್ಲಿ ಕಳೆಯುವಂತಾಗಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka