ಮನೆಯ ಮೇಲೆಯೇ ಉರುಳಿ ಬಿದ್ದ ಸರ್ಕಾರಿ ಬಸ್!

09/04/2025
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ಪಲ್ಟಿಯಾಗಿರುವ ಘಟನೆ ಕೊಪ್ಪ ತಾಲೂಕಿನ ಜಲದುರ್ಗ ಬಳಿ ನಡೆದಿದೆ.
ಬೆಂಗಳೂರಿನಿಂದ ಶೃಂಗೇರಿಗೆ ಹೋಗುತ್ತಿದ್ದ ಸರ್ಕಾರಿ ಬಸ್ ನಲ್ಲಿ 50 ಜನರು ಪ್ರಯಾಣಿಸುತ್ತಿದ್ದರು. ಜಲದುರ್ಗ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಕೆಳಗಿದ್ದ ಮನೆಯೊಂದರ ಮೇಲೆಯೇ ಉರುಳಿ ಬಿದ್ದಿದೆ.
ಬಸ್ಸಿನಲ್ಲಿದ್ದ 50 ಜನರಲ್ಲಿ 20 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಜಯಪುರ, ಕೊಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅಪಘಾತದ ಸ್ಥಳದಲ್ಲಿ ನೂರಾರು ಸ್ಥಳೀಯರು, ವಾಹನ ಸವಾರರ ನೆರೆದಿದ್ದರು. ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: