ಚಾರ್ಮಾಡಿ ಘಾಟ್ ನಲ್ಲಿ ಬಂಡೆ ಕಲ್ಲಿಗೆ ಡಿಕ್ಕಿ ಹೊಡೆದ ಲಾರಿ

06/01/2024
ಚಾರ್ಮಾಡಿ ಘಾಟ್ ನಲ್ಲಿ ಬಂಡೆ ಕಲ್ಲಿಗೆ ಲಾರಿ ಡಿಕ್ಕಿ ಲಾರಿ ಚಾಲಕನಿಗೆ ಪೆಟ್ಟಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಕೊಟ್ಟಿಗೆಹಾರ ಕರಾವಳಿ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನ 6ನೇ ತಿರುವಿನಲ್ಲಿ ಗೊಬ್ಬರ ತುಂಬಿಸಿಕೊಂಡು ಚಿಕ್ಕಮಗಳೂರು ಕಡೆಯಿಂದ ಮಂಗಳೂರು ಕಡೆಗೆ ಸಾಗಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಚಾರ್ಮಾಡಿ ಘಾಟ್ ನ ಬಂಡೆ ಕಲ್ಲಿಗೆ ಡಿಕ್ಕಿ ಹೊಡೆಯಿತು.
ಪರಿಣಾಮವಾಗಿ ಲಾರಿಯ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ಚಾರ್ಮಾಡಿ ಘಾಟ್ ನಲ್ಲಿ ಎರಡು ದಿನದಿಂದ ತುಂತುರು ಮಳೆಯಾಗುತ್ತಿದ್ದು ಚಾಲಕನಿಗೆ ರಸ್ತೆ ಸರಿಯಾಗಿ ಕಾಣದೆ ಅಪಘಾತ ಸಂಭವಿಸಿದೆ.