ಚಾರ್ಮಾಡಿ ಘಾಟ್ ನಲ್ಲಿ ಬಂಡೆ ಕಲ್ಲಿಗೆ ಡಿಕ್ಕಿ ಹೊಡೆದ ಲಾರಿ

charmadi
06/01/2024

ಚಾರ್ಮಾಡಿ ಘಾಟ್ ನಲ್ಲಿ ಬಂಡೆ ಕಲ್ಲಿಗೆ ಲಾರಿ ಡಿಕ್ಕಿ  ಲಾರಿ ಚಾಲಕನಿಗೆ ಪೆಟ್ಟಾಗಿದ್ದು  ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಕೊಟ್ಟಿಗೆಹಾರ ಕರಾವಳಿ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನ 6ನೇ ತಿರುವಿನಲ್ಲಿ ಗೊಬ್ಬರ ತುಂಬಿಸಿಕೊಂಡು ಚಿಕ್ಕಮಗಳೂರು ಕಡೆಯಿಂದ ಮಂಗಳೂರು ಕಡೆಗೆ ಸಾಗಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಚಾರ್ಮಾಡಿ ಘಾಟ್ ನ ಬಂಡೆ ಕಲ್ಲಿಗೆ ಡಿಕ್ಕಿ ಹೊಡೆಯಿತು.

ಪರಿಣಾಮವಾಗಿ ಲಾರಿಯ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿ  ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ಚಾರ್ಮಾಡಿ ಘಾಟ್ ನಲ್ಲಿ ಎರಡು ದಿನದಿಂದ ತುಂತುರು ಮಳೆಯಾಗುತ್ತಿದ್ದು ಚಾಲಕನಿಗೆ ರಸ್ತೆ ಸರಿಯಾಗಿ ಕಾಣದೆ ಅಪಘಾತ ಸಂಭವಿಸಿದೆ.

ಇತ್ತೀಚಿನ ಸುದ್ದಿ

Exit mobile version