ಕಾಂಗ್ರೆಸ್ ಗೆ ಹಾರಿದ ಕಮಲದ ಹಕ್ಕಿ | ಬಿಜೆಪಿ ತೊರೆದ ಕೊಳ್ಳೇಗಾಲದ ಮಾಜಿ ಶಾಸಕ
ಚಾಮರಾಜನಗರ: ಕೊಳ್ಳೇಗಾಲದ ಬಿಜೆಪಿ ಟಿಕೆಟ್ ಆಕಾಂಕ್ಷಿ, ಪ್ರಭಾವಿ ರಾಜಕಾರಣಿ, ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರುತ್ತಿದ್ದೇನೆಂದು ಘೋಷಿಸಿದ್ದಾರೆ.
ಚಾಮರಾಜನಗರದಲ್ಲಿ ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ ಮಾತನಾಡಿ, ಬಿಜೆಪಿ ನಡೆಸಿಕೊಳ್ಳುತ್ತಿರುವ ರೀತಿಯಿಂದ ಬೇಸತ್ತು ಮಂಗಳವಾರ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರುತ್ತಿದ್ದೇನೆ. ಕಾಂಗ್ರೆಸ್ ನ ಎಲ್ಲಾ ಹಾಲಿ, ಮಾಜಿ ಶಾಸಕರು ನನ್ನನ್ನು ಆಹ್ವಾನಿಸಿದರು, ಗೌರವಯುತವಾಗಿ ರಾಜಕಾರಣ ಮಾಡಬೇಕಿದ್ದರಿಂದ ಮರಳಿ ಕಾಂಗ್ರೆಸ್ ಗೆ ಸೇರುತ್ತಿದ್ದೇನೆಂದು ಸ್ಪಷ್ಟಪಡಿಸಿದ್ದಾರೆ.
ಹಳೇ ಮೈಸೂರು ಭಾಗದತ್ತ ಹೆಚ್ಚು ಗಮನ ಹರಿಸಿರುವ ಬಿಜೆಪಿಗೆ ಒಂದೊಂದು ಸ್ಥಾನವೂ ಮುಖ್ಯವಾಗಿದ್ದು ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ ಕೈ ಪಡೆಗೆ ಸೇರಿರುವುದು ದೊಡ್ಡ ಹೊಡೆತ ಕೊಡಬಹುದು ಎನ್ನಲಾಗುತ್ತಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw