ಅಪಘಾತವಾಗಿ ಜೀವನ್ಮರಣ ಹೋರಾಟ ನಡೆಸುತ್ತಿರುವ ಕೋತಿ
23/07/2024
ಕೊಟ್ಟಿಗೆಹಾರ: ಚಾರ್ಮಾಡಿ ಘಾಟ್ ನ ಅಣ್ಣಪ್ಪ ಸ್ವಾಮಿ ದೇವಸ್ಥಾನದ ಬಳಿ ಕೋತಿಯೊಂದು ಅಪಘಾತವಾಗಿ ಜೀವನ್ಮರಣದಲ್ಲಿ ಹೋರಾಟ ನಡೆಸುತ್ತಿರುವ ಘಟನೆ ಬೆಳಕಿಗೆ ಬಂದಿದೆ.
ಕೆಲವು ದಿನಗಳ ಹಿಂದೆ ಕೋತಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಹೋಗಿ ಕೋತಿಗೆ ಗಂಭೀರ ಗಾಯವಾಗಿದೆ. ಕೋತಿಯನ್ನು ನೋಡಿದ ಪ್ರವಾಸಿಗರು ಅದಕ್ಕೆ ಮಳೆಗೆ ಪ್ಲಾಸ್ಟಿಕ್ ಮುಚ್ಚಿ ಸಾಗಿದ್ದು ಅದು ಜೀವನ್ಮರಣ ಹೋರಾಟ ನಡೆಸುತ್ತಿದೆ ಎಂದು ಪ್ರವಾಸಿಗರು ತಿಳಿಸಿದ್ದಾರೆ.
ಆದರೆ ಅರಣ್ಯ ಇಲಾಖೆಯ ಗಮನಕ್ಕೆ ಬಾರದ ಕಾರಣ ಕೋತಿ ಜೀವವಿದ್ದು ಬದುಕಿಗಾಗಿ ಹೋರಾಟ ನಡೆಸುತ್ತಿದೆ. ಸಂಬಂಧಿಸಿದ ಅರಣ್ಯ ಅಧಿಕಾರಿಗಳು ಅಪಘಾತದಲ್ಲಿ ಗಾಯವಾದ ಕೋತಿಗೆ ಚಿಕಿತ್ಸೆ ನೀಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: