ಚಲಿಸುತ್ತಿದ್ದ ಕಾರಿಗೆ ಬೆಂಕಿ: ನಡು ರಸ್ತೆಯಲ್ಲಿ ಸುಟ್ಟು ಭಸ್ಮವಾದ ಕಾರು
ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಇಡೀ ಕಾರು ಸುಟ್ಟು ಭಸ್ಮವಾಗಿರುವ ಘಟನೆ ಉಡುಪಿಯ ಇಂದ್ರಾಳಿ ಸಮೀಪ ಇಂದು ನಸುಕಿನ ವೇಳೆ ನಡೆದಿದೆ.
ಕಿನ್ನಿಮುಲ್ಕಿಯ ಮುರಳಿಧರ್ ಎಂಬವರು ತನ್ನ ಕಾರನ್ನು ಮಣಿಪಾಲ ಕಡೆಯಿಂದ ಉಡುಪಿ ಕಡೆ ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ಕಾರಿನ ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡಿತು ಎನ್ನಲಾಗಿದೆ.
ಕಾರಿನಲ್ಲಿ ಒಬ್ಬರೇ ಇದ್ದ ಇವರು ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದರು. ಆದರೆ ಬೆಂಕಿ ಇಡೀ ಕಾರಿಗೆ ಹಬ್ಬಿತು. ತಕ್ಷಣ ಮುರುಳಿಧರ್ ಕಾರಿನಿಂದ ಇಳಿದು ಅಪಾಯದಿಂದ ಪಾರಾದರು.
ಕೂಡಲೇ ಸ್ಥಳಕ್ಕೆ ಆಗಮಿಸಿದ ಉಡುಪಿಯ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಆದರೆ ಬೆಂಕಿಯಿಂದ ಇಡೀ ಕಾರು ಸುಟ್ಟು ಭಸ್ಮ ವಾಗಿ ಲಕ್ಷಾಂತರ ನಷ್ಟ ಉಂಟಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw