ಆರ್ಥಿಕ ಸಮಸ್ಯೆಯಿಂದ ನೊಂದು ವ್ಯಕ್ತಿ ಸಾವಿಗೆ ಶರಣು
ಆರ್ಥಿಕ ಸಮಸ್ಯೆಯಿಂದ ಬೇಸತ್ತ ವ್ಯಕ್ತಿಯೊಬ್ಬರು ನೇಣುಬಿಗಿದುಕೊಂಡು ಸಾವಿಗೆ ಶರಣಾದ ಘಟನೆ ಕುಂದಾಪುರ ತಾಲೂಕಿನ ಕೋಟೇಶ್ವರ ಗ್ರಾಮದಲ್ಲಿ ಫೆ.28ರಂದು ನಡೆದಿದೆ.
ಕೋಟೇಶ್ವರ ಗ್ರಾಮದ ನಿವಾಸಿ ಶಂಕರ್ ಪೂಜಾರಿ ಮೃತಪಟ್ಟವರು ಎಂದು ಗುರುತಿಸಲಾಗಿದೆ ಇವರು ಟೈಲ್ಸ್ ಕೆಲಸ ಮಾಡಿಕೊಂಡಿದ್ದು, ವಿಪರೀತ ಕುಡಿತದ ಚಟ ಹೊಂದಿದ್ದರು. ಇದರಿಂದ ಹಣಕಾಸಿನ ಸಮಸ್ಯೆ ಸಿಲುಕಿದ್ದರು ಎನ್ನಲಾಗಿದೆ.
ಈ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನಿನ್ನೆ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw