ರೈಲ್ವೆ ಸಿಬ್ಬಂದಿಯೊಬ್ಬರು ಬಾವಿಗೆ ಬಿದ್ದು ಸಾವು
ಉಡುಪಿ, ಎ.28: ರೈಲ್ವೆ ಸಿಬ್ಬಂದಿಯೊಬ್ಬರು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಶುಕ್ರವಾರ ಇಂದ್ರಾಳಿಯ ರೈಲ್ವೆ ನಿಲ್ದಾಣದ ಸಮೀಪ ನಡೆದಿದೆ.
ಮೃತರನ್ನು ನಿತ್ಯಾನಂದ ಶೆಟ್ಟಿಗಾರ್(47) ಎಂದು ಗುರುತಿಸಲಾಗಿದೆ. ಬಾವಿಗೆ ಬಿದ್ದು ಮೃತಪಟ್ಟ ಇವರ ಮೃತದೇಹವನ್ನು ರೈಲ್ವೆ ಪೋಲಿಸ್, ನಗರ ಪೋಲಿಸ್ ಠಾಣೆ ಹಾಗೂ ಅಗ್ನಿಶಾಮಕ ದಳ ನಡೆಸಿದ ಕಾರ್ಯಾಚರಣೆ ಮೂಲಕ ಮೇಲಕ್ಕೆ ಎತ್ತಲಾಯಿತು. ಸಮಾಜಸೇವಕ ನಿತ್ಯಾನಂದ ಒಳಕಾಡು ಇವರಿಗೆ ಸಹಕರಿಸಿದರು.
ಇವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw