ಕಾರು ಹಾಗೂ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ: ಆರು ಮಂದಿ ಸಾವು ಇಬ್ಬರು ಗಂಬೀರ
ಕಾರು ಹಾಗೂ ಸರ್ಕಾರಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಸಂಪಾಜೆಯಲ್ಲಿ ನಡೆದಿದೆ.
ಮಡಿಕೇರಿಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರು ಹಾಗೂ ಮಂಗಳೂರು ಕಡೆಯಿಂದ ಮಡಿಕೇರಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಕಾರು ಸಂಪೂರ್ಣ ಜಖಂಗೊಂಡಿದೆ.
ಕಾರಿನಲ್ಲಿ ಮಂಡ್ಯ ಜಿಲ್ಲೆಯ 8 ಮಂದಿ ಪ್ರಯಾಣಿಸುತ್ತಿದ್ದು, ಕಾರಿನಲ್ಲಿದ್ದ 3 ಮಕ್ಕಳು, ಎರಡು ಮಹಿಳೆಯರು ಹಾಗು ಒಬ್ಬರು ಪುರುಷ ಮೃತಪಟ್ಟಿದ್ದಾರೆ. ಇಬ್ಬರು ತೀವ್ರ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https:/