ಕಾರು ಮತ್ತು ಪಿಕ್ ಅಪ್ ನಡುವೆ ಭೀಕರ ಅಪಘಾತ: 7 ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು

ಗುವಾಹಟಿ: ವೇಗವಾಗಿ ಬಂದ ಕಾರೊಂದು ಪಿಕ್ ಅಪ್ ಗೆ ಡಿಕ್ಕಿ ಹೊಡೆದ ಪರಿಣಾಮ 7 ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಅಸ್ಸಾಂನ ಗುವಾಹಟಿಯಲ್ಲಿ ನಡೆದಿದೆ.
ನಗರದ ಜಲುಕಬಾರಿ ಮೇಲ್ಸೇತುವೆ ಬಳಿ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಎಸ್ಯುವಿ ಕಾರು ರಸ್ತೆ ವಿಭಜಕವನ್ನು ದಾಟಿ ಎದುರಿನಿಂದ ಬರುತ್ತಿದ್ದ ಪಿಕ್ ಅಪ್ ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರಿನಲ್ಲಿ ಸುಮಾರು 10 ಮಂದಿ ಪ್ರಯಾಣಿಕರಿದ್ದರು, ಅಪಘಾತದ ತೀವ್ರತೆಗೆ ಕಾರು ಮತ್ತು ಪಿಕ್ ಅಪ್ ಗುರುತಿಸಲಾಗದಷ್ಟು ಜಖಂಗೊಂಡಿದೆ. ಕಾರಿನಲ್ಲಿದ್ದವರು ಅಸ್ಸಾಂ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಹಾಸ್ಟೆಲ್ನಲ್ಲಿ ಉಳಿದುಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
10 ವಿದ್ಯಾರ್ಥಿಗಳ ಪೈಕಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದ ಮೂವರು ವಿದ್ಯಾರ್ಥಿಗಳು ಹಾಗೂ ಪಿಕ್ ಅಪ್ ನಲ್ಲಿದ್ದ ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಗುವಾಹಟಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ವಿದ್ಯಾರ್ಥಿಗಳನ್ನು ದಿಬ್ರುಗಢದ ಇಮೋನ್ ಬರುವಾ, ಶಿವಸಾಗರ್ ನ ಕೌಶಿಕ್ ಮೋಹನ್, ಗುವಾಹಟಿಯ ಅರಿಂದಮ್ ಭುವಲ್, ಗುವಾಹಟಿಯ ನಿಯೋರ್ ದೇಕಾ, ನಾಗಾಂವ್ ನ ಉಪಂಗ್ಶು ಶರ್ಮಾ, ಮಜುಲಿಯ ರಾಜ್ ಕಿರಣ್ ಭುಯಾನ್ ಮತ್ತು ಮಂಗಲ್ದೋಯಿಯಿಂದ ಕೌಶಿಕ್ ಬರುವಾ ಎಂದು ಗುರುತಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw