ದಂಪತಿ ಮೃತದೇಹ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್: ಆತ್ಮಹತ್ಯೆ ಅಲ್ಲ, ಜೋಡಿ ಕೊಲೆ! - Mahanayaka
5:09 PM Thursday 26 - December 2024

ದಂಪತಿ ಮೃತದೇಹ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್: ಆತ್ಮಹತ್ಯೆ ಅಲ್ಲ, ಜೋಡಿ ಕೊಲೆ!

athani
07/11/2024

ಚಿಕ್ಕೋಡಿ:  ದಂಪತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಬುಧವಾರ ನಡೆದಿದ್ದು, ಈ ಘಟನೆಗೆ ಹೊಸ ಟ್ವಿಸ್ಟ್ ದೊರಕಿದೆ.

ದಂಪತಿಯ ಸಾವು ಆತ್ಮಹತ್ಯೆಯಲ್ಲ, ಇದು ಜೋಡಿ ಕೊಲೆ ಎಂದು ಬೆಳಗಾವಿ ಎಸ್ ಪಿ ಭೀಮಾಶಂಕರ್ ಗುಳೇದ ಮಾಹಿತಿ ನೀಡಿದ್ದಾರೆ.

ನಾನಾಸಾಹೇಬ ಚವ್ಹಾಣ(58) ಜಯಶ್ರೀ ಚವ್ಹಾಣ(50) ಮೃತಪಟ್ಟವರಾಗಿದ್ದಾರೆ.   ಇವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ವೇಳೆ ಇದು ಜೋಡಿ ಕೊಲೆ ಎನ್ನುವುದು ತಿಳಿದು ಬಂದಿದೆ. ಈ ಪ್ರಕರಣ ಸಂಬಂಧ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿರುವುದಾಗಿ ಅವರು ತಿಳಿಸಿದ್ದಾರೆ.

ಕೊಲೆ ನಡೆದು  6 ದಿನಗಳಲ್ಲಿ ಮರತದೇಹ ವಾಸನೆ ಬಂದಿತ್ತು.  ಇಲ್ಲಿನ ಮದಭಾವಿ ರಸ್ತೆ ಚವ್ಹಾಣ ತೋಟದ ಮನೆಯ ಸುತ್ತಲೂ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸದ್ಯ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು   ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು  ಹೇಳಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ