ರಸ್ತೆ ದಾಟುತ್ತಿದ್ದ ಮಹಿಳೆಗೆ ಬಸ್ ಡಿಕ್ಕಿ: ಮಹಿಳೆ ಸ್ಥಳದಲ್ಲೇ ಸಾವು
ರಸ್ತೆ ದಾಟುತ್ತಿದ್ದ ವೇಳೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು ನಗರದ ಬೆಂದೂರ್ ವೆಲ್ ಬಳಿ ನಡೆದಿದೆ.
ಮೃತರನ್ನು ಐರಿನ್ ಡಿಸೋಜಾ ಎಂದು ಗುರುತಿಸಲಾಗಿದೆ. ಆ್ಯಗ್ನೆಸ್ ಸರ್ಕಲ್ ಕಡೆಯಿಂದ ಬಂದ ಸಿಟಿ ಬಸ್ ಬೆಂದೂರ್ ವೆಲ್ ಜಂಕ್ಷನ್ ನಲ್ಲಿ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸಿದೆ. ಈ ವೇಳೆ ಅದೇ ಬಸ್ಸಿನಿಂದ ಇಳಿದು ಬಸ್ಸಿನ ಮುಂಭಾಗದಿಂದ ರಸ್ತೆ ದಾಟುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಸ್ ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದ ಐರಿನ್ ಅವರ ಮೈಮೇಲೆ ಬಸ್ಸಿನ ಮುಂಭಾಗದ ಚಕ್ರ ಹರಿದಿದೆ. ಇದರಿಂದ ತೀವ್ರ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿರುವುದಾಗಿ ತಿಳಿದುಬಂದಿದೆ. ಅಪಘಾತದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಸಾರ್ವಜನಿಕರು ಸ್ಥಳದಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw