ಕಾಯಲಿಲ್ಲ ಹಾಸನಾಂಬೆ: ದೇವರ ದರ್ಶನಕ್ಕೆ ಬಂದಿದ್ದ ಮಹಿಳೆ ಅಪಘಾತಕ್ಕೆ ಬಲಿ
ಚಿಕ್ಕಮಗಳೂರು: ಹಾಸನಾಂಬೆ ದರ್ಶನಕ್ಕೆ ಹೊರಟಿದ್ದ ಕಾರು ಕೆರೆಗೆ ಪಲ್ಟಿಯಾದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದಲ್ಲಿ ನಡೆದಿದೆ.
ವನಿತಾ (38) ಮೃತಪಟ್ಟ ಮಹಿಳೆಯಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಬಿದ್ದಿದೆ. ಬೆಳಗಿನ ಜಾವ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಕಾರು ಚಾಲಕ ಮಂಜು ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಜು ಅವರ ಪತ್ನಿ ವನಿತಾ ಅವರನ್ನು ರಕ್ಷಿಸಲು ಸ್ಥಳೀಯರು ಸಾಕಷ್ಟು ಪ್ರಯತ್ನ ನಡೆಸಿದರೂ ಅವರು ಬದುಕುಳಿಯಲಿಲ್ಲ.
ಕಾರು ಕೆರೆಗೆ ಬಿದ್ದಿದ್ದರಿಂದಾಗಿ ವನಿತಾ ಅವರು ಸಾಕಷ್ಟು ನೀರು ಕುಡಿದಿದ್ದರು. ಸ್ಥಳೀಯರು ಕಾರಿಗೆ ಹಗ್ಗಕಟ್ಟಿ ಮೇಲೆ ಎಳೆದಿದ್ದಾರೆ. ವನಿತಾ ಅವರನ್ನು ಬದುಕಿಸಲು ಸಾಕಷ್ಟು ಪ್ರಯತ್ನ ನಡೆಸಿದರೂ ಫಲಕೊಡಲಿಲ್ಲ.ಘಟನೆ ಸಂಬಂಧ ಬೇಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: