ತಪ್ಪಿಸಿಕೊಳ್ಳುತ್ತಿದ್ದ ಚಿರತೆಯ ಬಾಲ ಹಿಡಿದು ಬೋನಿಗೆ ಕೆಡವಿದ ಯುವಕ!
ತುಮಕೂರು : ಚಿರತೆ ಹಿಡಿಯುವ ಕಾರ್ಯಾಚರಣೆ ವೇಳೆ ಬಲೆಗೆ ಬೀಳದೇ ತಪ್ಪಿಸಿಕೊಳ್ಳುತ್ತಿದ್ದ ಚಿರತೆಯನ್ನು ಯುವಕನೊಬ್ಬ ಬಾಲದಲ್ಲಿ ಹಿಡಿದು ಬಲೆಗೆ ಕೆಡವಿ ಸೆರೆ ಹಿಡಿದ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ಕಸಬಾ ಹೋಬಳಿ ಕೆರೆಗೋಡಿ ರಂಗಾಪುರ ಬಳಿ ನಡೆದಿದೆ.
ತಿಪಟೂರು ತಾಲೂಕಿನ ರಂಗಾಪುರ ಗ್ರಾಮದ ಪುರಲೇಹಳ್ಳಿ ರಸ್ತೆ ಕುಮಾರಣ್ಣ ಎಂಬುವವರ ತೋಟದಲ್ಲಿ ಬೀಡುಬಿಟ್ಟಿದ ಸುಮಾರು 4ರಿಂದ 5 ವರ್ಷ ಪ್ರಾಯದ ಚಿರತೆಯನ್ನ ಹಿಡಿಯಲು ಅರಣ್ಯ ಇಲಾಖೆ ಬಲೆಬೀಸಿತ್ತು. ಆದರೆ ಸಾರ್ವಜನಿಕರ ಕೂಗಾಟದಿಂದ ಬಲೆಗೆ ಬೀಳದೆ ತಪ್ಪಿಸಿಕೊಳ್ಳುತ್ತಿದ್ದ ಚಿರತೆಯನ್ನು ರಂಗಾಪುರ ಗ್ರಾಮದ ಆನಂದ್ ಎಂಬ ಯುವಕ ಚಿರತೆ ಬಾಲ ಹಿಡಿದು ಅರಣ್ಯ ಇಲಾಖೆಯ ಬಲೆಗೆ ಕೆಡವಿದ್ದಾರೆ. ತಕ್ಷಣ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸಾರ್ವಜನಿಕರು ಚಿರತೆ ಹಿಡಿದ್ದು, ಸುರಕ್ಷಿತ ಸ್ಥಳಕ್ಕೆ ರವಾನಿಸಿದ್ದಾರೆ.
ಹಲವಾರು ದಿನಗಳಿಂದ ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿದ ಚಿರತೆಯನ್ನ ಸಾರ್ವಜನಿಕರ ನೆರವಿನೊಂದಿಗೆ ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: