ಚಲಿಸುತ್ತಿದ್ದ ಬೈಕ್ ಮೇಲೆ ಮುರಿದು ಬಿದ್ದ ಮರದ ಗೆಲ್ಲು: ಯುವಕ ಸಾವು

ಬೆಳ್ತಂಗಡಿ: ಚಲಿಸುತ್ತಿದ್ದ ಬೈಕ್ ಮೇಲೆ ಮರದ ಗೆಲ್ಲು ಮುರಿದು ಬಿದ್ದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಗೇರುಕಟ್ಟೆ ಜಾರಿಗೆಬೈಲು ಎಂಬಲ್ಲಿನ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಪ್ರವೀಣ್(25) ಮೃತಪಟ್ಟ ಯುವಕನಾಗಿದ್ದಾನೆ. ಬೆಳಾಲು ಗ್ರಾಮದ ನಿವಾಸಿಯಾಗಿರುವ ಪ್ರವೀಣ್, ಮಂಗಳೂರಿನ ಖಾಸಗಿ ಬ್ಯಾಂಕ್ ವೊಂದರಲ್ಲಿ ಲೋನ್ ಸೆಕ್ಷನ್ ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಕೆಲಸ ಮುಗಿಸಿ ಉಪ್ಪಿನಂಗಡಿ ಗುರುವಾಯನಕೆರೆ ರಾಜ್ಯ ಹೆದ್ದಾರಿಯಲ್ಲಿ ಪ್ರವೀಣ್ ಬರುತ್ತಿದ್ದ ವೇಳೆ ಜಾರಿಗೆ ಬೈಲು ಬಳಿ ರಸ್ತೆ ಬದಿಯ ಮರದ ಗೆಲ್ಲು ಮುರಿದು ಬೈಕ್ ಮೇಲೆ ಬಿದ್ದಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದರು.
ತಕ್ಷಣವೇ ಸ್ಥಳೀಯರು ಅವರನ್ನು ಆಸ್ಪತ್ರೆಗೆ ಸಾಗಿಸಿದರಾದರೂ ಅದಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: