ಮದುವೆ ಕಾರ್ಯಕ್ರಮದಲ್ಲಿ ಡಾನ್ಸ್ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಯುವತಿ ಸಾವು!

ಭೋಪಾಲ್: ಮದುವೆ ಕಾರ್ಯಕ್ರಮದಲ್ಲಿ ಖುಷಿ ಖುಷಿಯಾಗಿ ಡಾನ್ಸ್ ಮಾಡುತ್ತಿದ್ದ ಯುವತಿಯೊಬ್ಬಳು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ವಿದಿಶಾ ಜಿಲ್ಲೆಯ ರೆಸಾರ್ಟ್ ವೊಂದರಲ್ಲಿ ನಡೆದಿದೆ.
ಇಂದೋರ್ ನಿವಾಸಿ ಪರಿಣಿತಾ ಜೈನ್ ಮೃತಪಟ್ಟ ಯುವತಿಯಾಗಿದ್ದಾಳೆ. ವೇದಿಕೆಯಲ್ಲಿ ಡಾನ್ಸ್ ಮಾಡುತ್ತಿದ್ದ ಪರಿಣಿತಾ ಏಕಾಏಕಿ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾಳೆ. ಈ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸಮಾರಂಭದಲ್ಲಿ ಸುಮಾರು 200 ಅತಿಥಿಗಳು ಇದ್ದರು. ಈ ಪೈಕಿ ಒಬ್ಬರು ವೈದ್ಯರು ಕೂಡ ಇದ್ದರು. ಅವರು ತಕ್ಷಣವೇ ಸಿಪಿಆರ್ ನೀಡಿ ಯುವತಿಯನ್ನು ರಕ್ಷಿಸಲು ಪ್ರಯತ್ನಿಸಿದರು. ಆದರೆ ಅದು ಫಲ ನೀಡಲಿಲ್ಲ. ತಕ್ಷಣವೇ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಆದ್ರೆ ಅಷ್ಟರಲ್ಲಾಗಲೇ ಯುವತಿ ಕೊನೆಯುಸಿರೆಳೆದಿದ್ದಾಳೆ.
ಎಂಬಿಎ ಪದವೀಧರಳಾಗಿದ್ದ ಪರಿಣಿತಾ ದಕ್ಷಿಣ ತುಕೋಗಂಜ್ ನಲ್ಲಿ ತಮ್ಮ ಪೋಷಕರೊಂದಿಗೆ ವಾಸಿಸುತ್ತಿದ್ದರು. ಇವರ ಸಹೋದರ ಕೂಡ 12 ವರ್ಷದಲ್ಲಿರುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದ ಎಂದು ಹೇಳಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: