ಚುನಾವಣಾ ಪ್ರಚಾರದ ವೇಳೆ ಮಹಿಳೆಯೊಂದಿಗೆ ಅನುಚಿತವಾಗಿ ವರ್ತನೆ ಆರೋಪ: ಎಎಪಿ ಶಾಸಕನ ವಿರುದ್ಧ ಪ್ರಕರಣ ದಾಖಲು
ದೆಹಲಿ ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ, ಅನುಚಿತ ಸನ್ನೆಗಳನ್ನು ಮಾಡಿದ ಮತ್ತು ಫ್ಲೈಯಿಂಗ್ ಕಿಸ್ ಗಳನ್ನು ನೀಡಿದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕ ದಿನೇಶ್ ಮೊಹಾನಿಯಾ ವಿರುದ್ಧ ಮಂಗಳವಾರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂಗಮ್ ವಿಹಾರ್ ನ ಎಎಪಿ ಶಾಸಕನ ವಿರುದ್ಧ ಕಿರುಕುಳ ಮತ್ತು ಲೈಂಗಿಕ ಕಿರುಕುಳದ ಆರೋಪದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಪ್ರಚಾರದ ವೇಳೆ ಮೊಹಾನಿಯಾ ತನ್ನ ಮೇಲೆ ಫ್ಲೈಯಿಂಗ್ ಕಿಸ್ ಕೊಟ್ಟಿದ್ದಾರೆ ಎಂದು ಮಹಿಳೆ ತನ್ನ ದೂರಿನಲ್ಲಿ ಹೇಳಿದ್ದಾರೆ. ತನ್ನ ಆರೋಪಕ್ಕೆ ಪೂರಕವಾಗಿ ಮಹಿಳೆಯು ಘಟನೆಯ ವೀಡಿಯೊವನ್ನು ಸಾಕ್ಷ್ಯವಾಗಿ ನೀಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj