ಅಬ್ಬಕ್ಕ ಉತ್ಸವಕ್ಕೆ ಕೇವಲ 10 ಲಕ್ಷ ರೂ. ಬಿಡುಗಡೆ: ಸರ್ಕಾರಕ್ಕೆ ದಾರಿದ್ರ್ಯ ಬಂದಿದೆ ಎಂದ ಯು.ಟಿ.ಖಾದರ್!

u t khadar
04/01/2023

ಮಂಗಳೂರು: ಪ್ರತೀ ವರ್ಷ ಅಬ್ಬಕ್ಕ ಉತ್ಸವಕ್ಕೆ ರಾಜ್ಯ ಸರ್ಕಾರ 50 ಲಕ್ಷ ರೂಪಾಯಿ ಬಿಡುಗಡೆ ಮಾಡುತ್ತಿತ್ತು. ಆದರೆ ಈ ಸಲ ಸುನೀಲ್ ಕುಮಾರ್ ಕನ್ನಡ ಸಂಸ್ಕೃತಿ ಸಚಿವರಾಗಿದ್ದರೂ ಸಹ ಕೇವಲ 10 ಲಕ್ಷ ರೂ. ಮಾತ್ರ ಬಿಡುಗಡೆಯಾಗಿದೆ ಎಂದು ವಿಪಕ್ಷ ಉಪನಾಯಕ ಯು.ಟಿ.ಖಾದರ್ ಆಕ್ರೋಶ ವ್ಯಕ್ತಪಡಿಸಿದರು.

ಮಂಗಳೂರಿನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ರಾಜ್ಯ ಸರ್ಕಾರ ಆರ್ಥಿಕವಾಗಿ ದಾರಿದ್ರ್ಯದ ಪರಿಸ್ಥಿತಿಗೆ ಬಂದಿದೆ. ಅಬ್ಬಕ್ಕ ಉತ್ಸವಕ್ಕೆ ಅನುದಾನ ಕಡಿತ ಮಾಡಿರುವುದು ದೇಶಕ್ಕಾಗಿ ತ್ಯಾಗ ಮಾಡಿದ ವೀರರಾಣಿ ಅಬ್ಬಕ್ಕನಿಗೆ ಮಾಡಿದ ಅವಮಾನ ಎಂದರು.

ಇವತ್ತು ಸಮರ್ಪಕ ಆಡಳಿತ ಮಾಡಲು ರಾಜ್ಯ ಸರ್ಕಾರ ವಿಫಲವಾಗಿದೆ. ಇನ್ನೂ ಬಡವರಿಗೆ ಬಿಪಿಎಲ್ ಕಾರ್ಡ್ ಕೊಡುವ ವ್ಯವಸ್ಥೆ ಆಗಿಲ್ಲ. ಕಾಂಗ್ರೆಸ್ ಸರ್ಕಾರ ಜನರಿಗೆ ಅಗತ್ಯ ಸೇವೆಗಳನ್ನು ಕೊಡ್ತಾ ಇತ್ತು. ಕೋವಿಡ್ ಅಂತ ಹೇಳಿ ಜನರಿಗೆ ಮಾಸ್ಕ್ ಹಾಕಲಷ್ಟೇ ಹೇಳ್ತಾ ಇದ್ದಾರೆ. ಅದು ಬಿಟ್ಟು ಆರೋಗ್ಯ ಸೇವೆಗೆ ಬೇಕಾದ ವ್ಯವಸ್ಥೆಗಳು ಆಗಿಲ್ಲ. ಭಾವನಾತ್ಮಕ ವಿಚಾರ ಇಟ್ಟುಕೊಂಡು ಬಿಜೆಪಿ ಸರ್ಕಾರ ನಡೆಸ್ತಿದೆ. ಅದನ್ನ ಬಿಟ್ಟು ‌ಬಿಜೆಪಿ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ  ಎಂದು ಟೀಕಿಸಿದರು.

ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಮಂಗಳೂರಿಗೆ ಆಗಮಿಸುವ ಕುರಿತಂತೆ ಇದೇ ವೇಳೆ ಮಾಹಿತಿ ನೀಡಿದ ಅವರು,  ನಾಳೆ ಸಂಜೆ ಐದು ಗಂಟೆಗೆ ಸಿದ್ದರಾಮಯ್ಯ ಮಂಗಳೂರಿಗೆ ಬರಲಿದ್ದಾರೆ. ಹರೇಕಳ ಗ್ರಾಮದಲ್ಲಿ ಕಾರ್ಯಕರ್ತರ ಸಮಾವೇಶ ‌ನಡೆಯಲಿದೆ. ರಾಜ್ಯ ಮತ್ತು ಜಿಲ್ಲೆಯ ಕಾಂಗ್ರೆಸ್ ‌ನಾಯಕರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

YouTube video player

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version