ಅಭಿವೃದ್ಧಿ ಆಧಾರದಲ್ಲಿ ಚುನಾವಣೆ ಗೆದ್ದಿದ್ದೇವೆ: ಸಚಿವೆ ಶೋಭಾ ಕರಂದ್ಲಾಜೆ
ಹಾಸನ: ಅಭಿವೃದ್ಧಿ ಆಧಾರದ ಮೇಲೆ ಚುನಾವಣೆ ಗೆಲ್ಲಬಹುದು ಅನ್ನೋದಕ್ಕೆ ಈ ಭಾರಿಯ ಉತ್ತರ ಪ್ರದೇಶದ ಚುನಾವಣೆ ಒಂದು ಸಾಕ್ಷಿ ಎಂದು ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಹಾಸನ ತಾಲೂಕಿನ ಕಾರೇಕೆರೆಯಲ್ಲಿ ಮಾತನಾಡಿದ ಅವರು, ಪಂಚರಾಜ್ಯ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ನಾವು ಗೆದ್ದಿದ್ದೇವೆ. ಬಹಳ ಕಠಿಣ ಎನ್ನುವ ಉತ್ತರ ಪ್ರದೇಶದಲ್ಲಿ ಕೂಡ ನಾವು ಗೆದ್ದಿದ್ದೀವಿ, ಬಹಳ ಖುಷಿಯಾಗಿದೆ ಎಂದರು.
ಅಭಿವೃದ್ಧಿ ಆಧಾರದ ಮೇಲೆ ಚುನಾವಣೆ ಗೆಲ್ಲಬಹುದು ಅನ್ನೋದಕ್ಕೆ ಈ ಭಾರಿಯ ಉತ್ತರ ಪ್ರದೇಶದ ಚುನಾವಣೆ ಒಂದು ಸಾಕ್ಷಿ. ನಾನು ಅಲ್ಲೇ 6 ತಿಂಗಳ ಕಾಲ ಇದ್ದೆ. ಪ್ರತಿಯೊಂದು ಹಳ್ಳಿಗಳಿಗೆ, ಪ್ರತಿಯೊಂದು ಕ್ಷೇತ್ರಗಳಿಗೆ ನಾನು ಹೋಗಿದ್ದೇನೆ. ಇಷ್ಟು ವರ್ಷಗಳ ಕಾಲ ಜಾತಿ, ಧರ್ಮದ ಆಧಾರದಲ್ಲಿ ಉತ್ತರ ಪ್ರದೇಶದಲ್ಲಿ ಚುನಾವಣೆ ನಡೆಯುತ್ತಿತ್ತು. ಇದೇ ಮೊದಲ ಭಾರಿಗೆ ಅಭಿವೃದ್ಧಿ ಆಧಾರದಲ್ಲಿ ಚುನಾವಣೆ ನಡೆದು ಗೆದ್ದಿದ್ದೇವೆ ಎಂದು ಹೇಳಿದರು.
ರಾಗಿ ಖರೀದಿಸುವಂತೆ ರೈತರ ಒತ್ತಾಯಿಸುತ್ತಿದ್ದಾರೆ. ರಾಗಿ ಖರೀದಿ ಹೆಚ್ಚು ಮಾಡಬೇಕೆಂಬ ರೈತರ ಬೇಡಿಕೆ ಬಗ್ಗೆ ಕೇಂದ್ರ ಸರ್ಕಾರ ಯೋಚನೆ ಮಾಡುತ್ತೆ. ಖರೀದಿ ಕೇಂದ್ರಗಳನ್ನು ಆರಂಭಿಸುವುದು ರಾಜ್ಯ ಸರ್ಕಾರ. ನಾನು ಸರ್ಕಾರದ ಜೊತೆ ಮಾತನಾಡುತ್ತೇನೆ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಆಟೋಗೆ ಡಿಕ್ಕಿ ಹೊಡೆದ ಟ್ರ್ಯಾಕ್ಟರ್: ಕೆನಡಾದಲ್ಲಿ ಭಾರತ ಮೂಲದ ಐವರು ವಿದ್ಯಾರ್ಥಿಗಳ ಸಾವು
ಪುರಾತನ ಕಾಲದ ಮಸೀದಿಗೆ ಕೇಸರಿ ಬಣ್ಣ ಬಳಿದ ದುಷ್ಕರ್ಮಿಗಳು
ಬುಧವಾರ ಪ್ರಮಾಣ ವಚನ ಸ್ವೀಕರಿಸಲಿರುವ ಭಗವಂತ್ ಮಾನ್: ರ್‍ಯಾಲಿಯಲ್ಲಿ ಭಾಗವಹಿಸಲಿರುವ ಕೇಜ್ರಿವಾಲ್
ಕೂದಲು ಕಸಿ ಮಾಡಿಸಿಕೊಂಡ ಮರುದಿನವೇ ಪೊಲೀಸ್ ಕಾನ್ ಸ್ಟೇಬಲ್ ದುರಂತ ಸಾವು!