ಗುಣತೀರ್ಥವಾಡಿ ಯುವತಿಯ ಭೀಕರ ಕೊಲೆ ಖಂಡಿಸಿ ಎಬಿವಿಪಿ ಪ್ರತಿಭಟನೆ - Mahanayaka
5:16 PM Monday 16 - September 2024

ಗುಣತೀರ್ಥವಾಡಿ ಯುವತಿಯ ಭೀಕರ ಕೊಲೆ ಖಂಡಿಸಿ ಎಬಿವಿಪಿ ಪ್ರತಿಭಟನೆ

abvp
06/09/2024

ಔರಾದ: ಬಸವಕಲ್ಯಾಣ ತಾಲ್ಲೂಕಿನ ಯುವತಿ ಕೊಲೆ ಖಂಡಿಸಿ ಔರಾದ ಪಟ್ಟಣದಲ್ಲಿ ಎಬಿವಿಪಿ ವತಿಯಿಂದ ತಹಶೀಲ್ದಾರರ ಮುಖಾಂತರ ಗೃಹ ಸಚಿವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಬಸವಕಲ್ಯಾಣ ತಾಲ್ಲೂಕಿನ ಗುಣತೀರ್ಥವಾಡಿ ಗ್ರಾಮದಲ್ಲಿ ಯುವತಿಯೊಬ್ಬಳನ್ನು ಭೀಕರವಾಗಿ ಕೊಲೆ ಮಾಡಿ ಮುಳ್ಳು ಕಂಟಿಯಲ್ಲಿ ಶವ ಬಿಸಾಡಿ ಹೋಗಿದ್ದಾರೆ. ಮೂಲತಃ ಬಸವಕಲ್ಯಾಣ ತಾಲ್ಲೂಕಿನ ಗುಂಡೂರ ಗ್ರಾಮದ ಭಾಗ್ಯಶ್ರೀ (18) ಕೊಲೆಯಾದ ಯುವತಿ.
ಈಕೆಯ ಪಾಲಕರು ಕಳೆದ ಕೆಲ ವರ್ಷಗಳಿಂದ ಗುಣತೀರ್ಥ ವಾಡಿ ಗ್ರಾಮದಲ್ಲಿ ಉಳಿದು ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ . ಕಳೆದ ಮೂರು ದಿನಗಳ ಹಿಂದೆ ರಾತ್ರಿ ವೇಳೆ ಈಕೆ ಮನೆಯಿಂದ ನಾಪತ್ತೆಯಾಗಿದ್ದು, ಭಾನುವಾರ ಬೆಳಿಗ್ಗೆ 11ರ ಸುಮಾರಿಗೆ ಗ್ರಾಮದ ಸರ್ಕಾರಿ ಶಾಲೆ ಪಕ್ಕದ ಮುಳ್ಳಿನ ಪೋದೆಯಲ್ಲಿ ಶವವಾಗಿ ಪತ್ತೆಯಾಗಿದೆ.

ಯುವತಿಯ ಮೃತದೇಹ ಬಹುತೇಕ ವಿವಸ್ತ್ರವಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ದೇಹದ ಹಲವು ಭಾಗಗಳಲ್ಲಿ ಗಾಯಗಳಿದ್ದು, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರಬಹುದು ಎನ್ನುವ ಬಗ್ಗೆ ಸಂಶಯ ವ್ಯಕ್ತವಾಗಿದೆ. ಆ ಹೆಣ್ಣುಮಗುವಿನ ಹತ್ಯೆ ಮಾಡಲು ಸಾಧ್ಯವಾಗಿರಬೇಕಾದರೆ ಕೊಲೆಗಾರನಿಗೆ ಕಾನೂನಿನ ಯಾವುದೇ ಭಯವೂ ಇಲ್ಲದೆ ರಾಜಾರೋಷವಾಗಿ ಕೃತ್ಯ ಮಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದರೆ, ನಮ್ಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟು ಕುಸಿದು ಹೋಗಿದೆ ಎನ್ನುವುದು ಸ್ಪಷ್ಟವಾಗಿ ತಿಳಿಯುವಂತಾಗಿದೆ. ಈ ಘಟನೆಯಿಂದ ರಾಜ್ಯದ ಮಹಿಳೆಯರು, ವಿದ್ಯಾರ್ಥಿ ಸಮುದಾಯ ಭಯಭೀತ ಗೊಂಡಿದೆ. ರಾಜ್ಯಾಧ್ಯಂತ ಈ ರೀತಿಯ ಘಟನೆಗಳನ್ನು ತಡೆಯಲು ಪ್ರಯತ್ನಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.


Provided by

ರಾಜ್ಯ ಸರ್ಕಾರ ದಿನದಿಂದ ದಿನಕ್ಕೆ ಹದಗೆಡುತ್ತಿರುವ ಕಾನೂನು ಸುವ್ಯವಸ್ಥೆಯ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು. ಸರ್ಕಾರಗಳು ಇಂತಹ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಕಾನೂನಿನ ಭಯ ಇಲ್ಲದಿರುವಾಗ ಮಾತ್ರ ಇಂತಹ ಘಟನೆಗಳು ನಡೆಯಲು ಸಾಧ್ಯ ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಗಮನಹರಿಸಬೇಕು ಹಾಗೂ ಉನ್ನತ ಮಟ್ಟದ ತನಿಖೆ ಮಾಡಬೇಕು ಪೊಲೀಸರು ಕೂಡಲೇ ಆರೋಪಿಗಳನ್ನು ಉಗ್ರ ಶಿಕ್ಷೆ ಆಗುವ ಹಾಗೆ ಸೂಕ್ತ ತನಿಖೆಯನ್ನು ಕೈಗೊಂಡ ಆ ಹೆಣ್ಣುಮಗುವಿನ ಕುಂಟುಬಕ್ಕೆ ನ್ಯಾಯ ಒದಗಿಸಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಔರಾದ ಶಾಖೆ ಆಗ್ರಹಿಸಿತು.

ಈ ಸಂದರ್ಭದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವಿಭಾಗ ಸಂಘಟನಾ ಕಾರ್ಯದರ್ಶಿ ಪಾಂಡು ಮೋರೆ, ಹಾಗೂ ಜಿಲ್ಲಾ ಸಂಚಾಲಕರು ಶಶಿಕಾಂತ ರಾಕಲೇ, ಸುರೇಶ ಮಾರ್ತೊಳೆ, ನೀತಿನ ಮೂಳ್ಗೆ, ಅಶೋಕ ಶೆಂಬೆಳ್ಳೆ, ಅನೀಲ ಮೇತ್ರೆ, ಮಲ್ಲಿಕಾರ್ಜುನ್ ಟೆಕರಾಜ,ವಿದ್ಯಾರ್ಥಿಗಳು ಭಾಗ್ಯಶ್ರಿ, ನೀತಿನ, ಶಿವಕುಮಾರ, ಅನೇಕ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವರದಿ: ರವಿಕುಮಾರ ಶಿಂದೆ


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ