ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯಕ್ತ ಎಬಿವಿಪಿಯಿಂದ ತಿರಂಗ ಯಾತ್ರೆ
ಮಂಗಳೂರು: ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯಕ್ತ ಎಬಿವಿಪಿ ಮಂಗಳೂರು ಮಹಾನಗರದ ವತಿಯಿಂದ ಮಂಜೇಶ್ವರ ಗೋವಿಂದ ಪೈ ವೃತ್ತದಿಂದ ಸ್ವಾತಂತ್ರ್ಯ ಹೋರಾಟದ ಸಂಧರ್ಭದಲ್ಲಿ ಸ್ವತಂತ್ರ ಧ್ವಜವನ್ನು ಹಾರಿಸಿ ಹೋರಾಟ ಮಾಡಿದ ಬಾವುಟಗುಡ್ಡದವರೆಗೆ ಬೃಹತ್ ತಿರಂಗ ಯಾತ್ರೆಯನ್ನು ಮಾಡಲಾಯಿತು.
ಸ್ವತಂತ್ರ ಭಾರತದ ಹೋರಾಟಕ್ಕಾಗಿ ಮೊದಲ ಸ್ವಾತಂತ್ರ ಧ್ವಜವನ್ನು ಹಾರಿಸಿ . ಸ್ವತಂತ್ರವನ್ನ ಘೋಷಿಸಿಕೊಂಡ ಸ್ಥಳ ಬಾವುಟಗುಡ್ಡ. ಆ ಸ್ಥಳವನ್ನು ನಾವೆಲ್ಲರೂ ಸ್ಮರಿಸಿಕೊಳ್ಳಬೇಕು ಎಂದು ಎಬಿವಿಪಿಯ ರಾಜ್ಯ ಕಾರ್ಯದರ್ಶಿ ಮಣೆಕಂಠ ಕಳಸಾ ಮಾತನಾಡಿದರು
ಮಂಜೇಶ್ವರ ಗೋವಿಂದ ಪೈ ವೃತ್ತದಿಂದ ಬಾವುಟ ಗುಡ್ಡದವರೆಗೆ ನೂರಾರು ವಿದ್ಯಾರ್ಥಿಗಳು ತಿರಂಗವನ್ನು ಹಿಡಿದು, ಭಾರತ್ ಮಾತಾ ಕಿ ಜೈ, ವಂದೇ ಮಾತರಂ ಘೋಷಣೆಗಳನ್ನು ಕೂಗುತ್ತಾ ತಿರಂಗ ಯಾತ್ರೆಯಲ್ಲಿ ಭಾಗವಹಿಸಿದ್ದರು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ಶಾಖೆ ವತಿಯಿಂದ 75ನೇ ಸ್ವತಂತ್ರ ದಿನದ ಅಂಗವಾಗಿ ಈ ತಿರಂಗ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು.
ಅಮೃತ ಮಹೋತ್ಸವದ ಸಂದರ್ಭದಲ್ಲಿ ನಾವೆಲ್ಲರೂ ಸ್ವತಂತ್ರದ ಹೋರಾಟಕ್ಕೆ ಸಾಕ್ಷಿಯಾದ ಸ್ಥಳಗಳ ವ್ಯಕ್ತಿಗಳ ಇತಿಹಾಸವನ್ನು ಇಂದಿನ ಯುವಜನತೆ ತಿಳಿದುಕೊಳ್ಳಬೇಕೆಂಬುವುದು ವಿದ್ಯಾರ್ಥಿ ಪರಿಷತ್ ಆಶಯ. ರಾಜ್ಯಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಸ್ವತಂತ್ರ ದಿನದ ಪ್ರಯುಕ್ತ ವಿದ್ಯಾರ್ಥಿ ಪರಿಷತ್ ನ ನೇತೃತ್ವದಲ್ಲಿ ತಿರಂಗ ಯಾತ್ರೆಗಳಲ್ಲಿ ಭಾಗವಹಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.
ಮಂಗಳೂರು ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಚಿನ ಕುಳಗೇರಿ ಮಾತನಾಡಿ, ವಿದ್ಯಾರ್ಥಿ ಸಮುದಾಯ ತಮ್ಮ ಶಿಕ್ಷಣದ ಜೊತೆಗೆ ಸ್ವತಂತ್ರ ಹೋರಾಟಕ್ಕಾಗಿ ಹೋರಾಡಿದ ವ್ಯಕ್ತಿಗಳ ಚರಿತ್ರೆಗಳನ್ನು ಅಧ್ಯಯನ ಮಾಡುವ ಪ್ರವೃತ್ತಿಯನ್ನು ಹೊಂದಬೇಕು ಎಂದರು. ತಮ್ಮ ಶಿಕ್ಷಣದ ನಂತರ ಹೋಗುವ ಎಲ್ಲ ಕ್ಷೇತ್ರಗಳಲ್ಲಿ ನಾನು ಮಾಡುವ ಕೆಲಸ ದೇಶಕ್ಕೆ ಒಳಿತನ್ನು ಮಾಡುವ ಹಾಗೆ ನಮ್ಮ ಕಾರ್ಯ ಇರಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಾದ ಶ್ರೇಯಸ್ ಶೆಟ್ಟಿ, ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯ ಶ್ರೀಲಕ್ಷ್ಮಿ ಮಠದಮೂಲೆ, ನಗರ ಕಾರ್ಯದರ್ಶಿ ಆದಿತ್ಯ ಶೆಟ್ಟಿ, ಪ್ರಮುಖರಾದ ಸ್ಕಂದ ಕಿರಣ, ಶ್ರೀಪಾದ ತಂತ್ರಿ, ಸುಶಾಂತ, ಮೇಘನಾ, ಪ್ರತಿಕ್ಷಾ, ಹರ್ಷಿತಾ, ಸಂತೋಷ ರೈ, ರಂಜಿತ,ರಾಹುಲ ಇತರರು ಇದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka