ಎಸಿಬಿ ದಾಳಿ : ಮುಜರಾಯಿ ತಹಶೀಲ್ದಾರ್ ಬಂಧನ
ಬೆಳಗಾವಿ: ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಮಂಜೂರಾಗಿದ್ದ ಅನುದಾನ ಬಿಡುಗಡೆಗಾಗಿ ಶೇ. 5ರಷ್ಟು ಲಂಚ ಕೇಳಿದ್ದ ಬೆಳಗಾವಿಯ ಮುಜರಾಯಿ ಇಲಾಖೆ ತಹಶೀಲ್ದಾರ್ ಮತ್ತು ಆತನ ಸಂಬಂಧಿಯನ್ನು ಎಸಿಬಿ ಅಧಿಕಾರಿಗಳು ಮಿಂಚಿನ ಕಾರ್ಯಾಚರಣೆ ನಡೆಸಿ ಶುಕ್ರವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ.
ಮುಜರಾಯಿ ತಹಶೀಲ್ದಾರ್ ದಶರಥ ನಕುಲ ಜಾಧವ ಹಾಗೂ ಆತನ ಸಂಬಂಧಿ ಸಂತೋಷ ಕಡೋಲಕರ ಬಂಧಿತ ಆರೋಪಿಗಳು. ರಾಮದುರ್ಗದಲ್ಲಿನ ಯಕಲಮ್ಮ ದೇವಸ್ಥಾನ ಜೀರ್ಣೋ ದ್ದಾರಕ್ಕಾಗಿ ಮುಜರಾಯಿ ಇಲಾಖೆಯ ಆರಾಧನಾ ಸ್ಕೀಂ ಅಡಿ 4 ಲಕ್ಷ ರೂ. ಮಂಜೂರಾಗಿತ್ತು. ಅನುದಾನ ಬಿಡುಗಡೆಗಾಗಿ ನಕುಲ ಜಾಧವ 20 ಸಾವಿರ ರೂ. ಬೇಡಿಕೆ ಇಟ್ಟಿದ್ದರು.
ಲಂಚದ ವಿಚಾರಕ್ಕೆ ಸಂಬಂಧಪಟ್ಟಂತೆ ದೇವಸ್ಥಾನದ ಸುಭಾಷ ಗೋಡಕೆ ಎಂಬವರು ಎಸಿಬಿಗೆ ದೂರು ನೀಡಿದ್ದರು. ದೂರು ಸ್ವೀಕರಿಸಿ ಕಾರ್ಯಾಚರಣೆ ನಡೆಸಿರುವ ಅಧಿಕಾರಿಗಳು ತಹಶೀಲ್ದಾರ್ ಪರವಾಗಿ ಲಂಚ ಸ್ವೀಕರಿಸುತ್ತಿದ್ದ ಆತನ ಸಂಬಂಧಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ಬಂಧಿಸಿದ್ದಾರೆ. ಬಳಿಕ ಇದೇ ಪ್ರಕರಣದಲ್ಲಿ ತಹಶೀಲ್ದಾರ್ ಜಾಧವ ಅವರನ್ನೂ ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ. ಎಸಿಬಿ ಎಸ್ಪಿ ಬಿ. ಎಸ್.ನೇಮಗೌಡ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಕರುಣಾಕರ ಶೆಟ್ಟಿ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ಗಳಾದ ಅಡಿವೇಶ ಗುದಿಗೊ ಪ್ಪ ಹಾಗೂ ಸುನಿಲ್ ಕುಮಾರ ಮತ್ತು ಸಿಬ್ಬಂದಿ ದಾಳಿ ನಡೆಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮಹಿಳೆಯರ ಏಷ್ಯಾಕಪ್ ಹಾಕಿ ಟೂರ್ನಿ: ಮಲೇಷ್ಯಾ ವಿರುದ್ಧ ಭಾರತ ತಂಡಕ್ಕೆ ಭರ್ಜರಿ ಗೆಲುವು
ಮತ್ತೆ ಕಂಪಿಸಿದ ಭೂಮಿ; ಭಯಭೀತರಾದ ಜನತೆ
ವಿದ್ಯುತ್ ದರ ಹೆಚ್ಚಳ ಮಾಡುವುದು ಅನಿವಾರ್ಯ: ಸಚಿವ ವಿ.ಸುನಿಲ್ ಕುಮಾರ್
ಕೊರಗಜ್ಜನ ವೇಷ ಹಾಕಿ ಅಪಹಾಸ್ಯ; ಮತ್ತೆ ಪ್ರಕರಣ ದಾಖಲು
ಜ. 23ರಂದು ಸಂಪೂರ್ಣ ಲಾಕ್ ಡೌನ್ ; ಸಿಎಂ ಸ್ಟಾಲಿನ್